ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಬ್ಬು ದರ:ಕೋರ್ಟ್‌ಗೆ ಸಕ್ಕರೆ ಕಾರ್ಖಾನೆಗಳು

Last Updated 4 ಡಿಸೆಂಬರ್ 2013, 20:06 IST
ಅಕ್ಷರ ಗಾತ್ರ

ಬೆಂಗಳೂರು: ರೈತರಿಂದ ಖರೀದಿಸುವ ಪ್ರತಿ ಟನ್‌ ಕಬ್ಬಿಗೆ ₨ 2,500 ಪಾವತಿಸ­ಬೇಕು ಎಂಬ ರಾಜ್ಯ ಸರ್ಕಾರದ ಆದೇಶ ಸರಿಯಲ್ಲ ಎಂದು ದೂರಿ ದಕ್ಷಿಣ ಭಾರತದ ಸಕ್ಕರೆ ಕಾರ್ಖಾನೆ­ಗಳ ಸಂಘ (ಸಿಸ್ಮಾ) ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ಸಕ್ಕರೆ ಕಾರ್ಖಾನೆಗಳು ಸಲ್ಲಿಸಬಹುದಾದ ಅರ್ಜಿಗೆ ಸಂಬಂಧಿಸಿದಂತೆ ಯಾವುದೇ ಆದೇಶ ನೀಡುವ ಮುನ್ನ ತನ್ನ ವಾದವನ್ನೂ ಆಲಿಸಬೇಕು ಎಂದು ಸರ್ಕಾರ ಈ ಮೊದಲೇ ಕೇವಿಯಟ್ ಸಲ್ಲಿಸಿತ್ತು. ಕಾರ್ಖಾನೆಗಳ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಎಸ್‌. ಬೋಪಣ್ಣ, ಸರ್ಕಾರಕ್ಕೆ ನೋಟಿಸ್‌ ಜಾರಿಗೆ ಮಂಗಳವಾರ ಆದೇಶಿಸಿದ್ದಾರೆ. ಅರ್ಜಿಯ ವಿಚಾರಣೆ ಇದೇ 11ರಂದು ನಡೆಯಲಿದೆ.

ಈ ಸಾಲಿನ ಹಂಗಾಮಿನಲ್ಲಿ ಪ್ರತಿ ಟನ್‌ ಕಬ್ಬಿಗೆ ₨ 2,100 ಎಫ್‌ಆರ್‌ಪಿ (ನ್ಯಾಯಸಮ್ಮತ ಬೆಲೆ) ನೀಡಬೇಕು ಎಂದು ಕೇಂದ್ರ ಸರ್ಕಾರ ಫೆಬ್ರುವರಿಯಲ್ಲೇ ಆದೇಶ ಹೊರಡಿಸಿದೆ. ಇದ­ಕ್ಕಿಂತ ಹೆಚ್ಚಿನ ದರ ನಿಗದಿ ಮಾಡುವ ಅಧಿಕಾರ  ‘ಕಬ್ಬು ನಿಯಂ­ತ್ರಣ ಮಂಡಳಿ’ಗೆ ಇಲ್ಲ ಎಂಬುದು ಕಾರ್ಖಾನೆಗಳ ವಾದ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT