ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರಾವಳಿಯಲ್ಲಿ ಮಳೆಮುಂಗಾರು ದುರ್ಬಲ

Last Updated 11 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಗುರುವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದಾದ್ಯಂತ ಮುಂಗಾರು ದುರ್ಬಲಗೊಂಡಿದೆ. ಕರಾವಳಿಯ ಕೆಲವೆಡೆ ಮಳೆಯಾಗಿದೆ. ಒಳನಾಡಿನಲ್ಲಿ ಒಣಹವೆ ಮುಂದುವರೆದಿದೆ.

ಸುಳ್ಯದಲ್ಲಿ 4, ಧರ್ಮಸ್ಥಳದಲ್ಲಿ 1 ಸೆಂ.ಮೀ ಮಳೆಯಾಗಿದೆ. ಗುಲ್ಬರ್ಗದಲ್ಲಿ ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ರಾಯಚೂರಿನಲ್ಲಿ ಅತಿ ಕನಿಷ್ಠ ಉಷ್ಣಾಂಶ 16.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಮುನ್ಸೂಚನೆ: ಮುಂದಿನ 48 ಗಂಟೆಗಳ ಕಾಲ ಕರಾವಳಿಯ ಕೆಲವೆಡೆ ಹಾಗೂ ರಾಜ್ಯದ ಉತ್ತರ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT