ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರುಣಾ ಕುಟುಂಬಸದಸ್ಯರ ವಿಚಾರಣೆ: ಜಯಾ ಒತ್ತಾಯ

Last Updated 12 ಫೆಬ್ರುವರಿ 2011, 20:35 IST
ಅಕ್ಷರ ಗಾತ್ರ

ಚೆನ್ನೈ (ಪಿಟಿಐ):  ನೀರಾ ರಾಡಿಯಾ ಜತೆ ಸಂಪರ್ಕ ಹೊಂದಿದ್ದ ತಮಿಳುನಾಡು ಸಿಎಂ ಎಂ.ಕರುಣಾನಿಧಿ ಹಾಗೂ ಅವರ ಕುಟುಂಬದ ಸದಸ್ಯರನ್ನು ಸಿಬಿಐ ವಿಚಾರಣೆಗೆ ಒಳಪಡಿಸಿದರೆ ಮಾತ್ರ 2 ಜಿ ಹಗರಣದ ಬಗ್ಗೆ ನಿಖರ ಮಾಹಿತಿಗಳು ಲಭ್ಯವಾಗಲಿವೆ ಎಂದು ಎಐಎಡಿಎಂಕೆ ಮುಖ್ಯಸ್ಥೆ ಜಯಲಲಿತಾ ಹೇಳಿದ್ದಾರೆ.

 ರಾಡಿಯಾ ಜತೆ ಕರುಣಾನಿಧಿ ಅವರಿಗಷ್ಟೇ ಅಲ್ಲದೇ, ಅವರ ಪುತ್ರಿ ಕನಿಮೊಳಿ ಮತ್ತು ಪತ್ನಿ ರಜತಿ ಅವರಿಗೂ ಗಾಢ ಸಂಪರ್ಕವಿತ್ತು. ಹೀಗಾಗಿ ಈ ಎಲ್ಲರನ್ನೂ ವಿಚಾರಣೆಗೆ ಒಳಪಡಿಸಬೇಕು. ರಾಷ್ಟ್ರದಲ್ಲಿ ಏನಾಗುತ್ತಿದೆ ಎಂಬುದನ್ನು ಜನತೆಗೆ ತಿಳಿಸುವ ಉದ್ದೇಶದಿಂದ ಈ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT