ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ಣಾಟಕ ಬ್ಯಾಂಕ್‌ಗೆ ಐಎಸ್‌ಒ ಪ್ರಮಾಣ ಪತ್ರ

Last Updated 17 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: ಬ್ಯಾಂಕಿಂಗ್ ವಹಿವಾಟು ಮತ್ತು ದತ್ತಾಂಶ ನಿರ್ವಹಣೆಯಲ್ಲಿ ಅಳವಡಿಸಿಕೊಂಡಿರುವ ಅತ್ಯುತ್ತಮ ತಂತ್ರಜ್ಞಾನಕ್ಕಾಗಿ ಕರ್ಣಾಟಕ ಬ್ಯಾಂಕ್‌ಗೆ ಜಾಗತಿಕ `ಐಎಸ್‌ಒ' ಪ್ರಮಾಣಪತ್ರ ಲಭಿಸಿದೆ.

  ಕರ್ಣಾಟಕ ಬ್ಯಾಂಕ್ ಬೆಂಗಳೂರು ದತ್ತಾಂಶ ಕೇಂದ್ರದಲ್ಲಿ ಅಳವಡಿಸಿಕೊಂಡಿರುವ ಭದ್ರತೆ ನಿರ್ವಹಣೆ ವ್ಯವಸ್ಥೆ (ಐಎಸ್‌ಎಂಎಸ್), ಮಂಗಳೂರು ಮುಖ್ಯ ಕಚೇರಿಯಲ್ಲಿನ ಮಾಹಿತಿ ತಂತ್ರಜ್ಞಾನ ಸೌಲಭ್ಯ `ಐಎಸ್‌ಒ' ಮನ್ನಣೆಗೆ ಪಾತ್ರವಾಗಿವೆ.

`ರಾಷ್ಟ್ರೀಯ ಗುಣಮಟ್ಟ ಖಾತರಿ (ಎನ್‌ಕ್ಯುಎ) ಸಂಸ್ಥೆಯ ಈ ಪ್ರಮಾಣಪತ್ರದ ಅವಧಿ 3 ವರ್ಷ. ಇದೊಂದು ಜಾಗತಿಕ ಮನ್ನಣೆ. ಗ್ರಾಹಕರಿಗೆ ಬ್ಯಾಂಕಿಂಗ್ ವಹಿವಾಟಿನಲ್ಲಿ ಸುರಕ್ಷತೆ ಖಾತರಿಪಡಿಸುತ್ತದೆ' ಎಂದು ಬ್ಯಾಂಕ್ ಅಧ್ಯಕ್ಷ ಪಿ. ಜಯರಾಂ ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT