ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ತವ್ಯ ವಾಕಥಾನ್

Last Updated 10 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಫೋಡರ್ ಜಂಭೋ ಕಿಡ್ಸ್ ಹಾಗೂ ಹ್ಯಾಪಿ ಕಿಡ್ಸ್ ಸಂಯುಕ್ತವಾಗಿ ಏರ್ಪಡಿಸಿರುವ `ಕರ್ತವ್ಯ 2012- ವಾಕಥಾನ್~ ಭಾನುವಾರ  ನಡೆಯಲಿದೆ.

ರಸ್ತೆ ಸುರಕ್ಷತೆ ಹಾಗೂ ಸಂಚಾರ ನಿಯಮ ಕುರಿತು ಮಕ್ಕಳು ಹಾಗೂ ಪೋಷಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಈ ವಾಕಥಾನ್ ಆಯೋಜಿಸಲಾಗಿದೆ.

ವಾಕಥಾನ್ ಜತೆಗೆ ಮಕ್ಕಳಿಗೆ ಅಪಘಾತಗಳನ್ನು ತಡೆಗಟ್ಟುವ ಬಗೆ ಹೇಗೆ? ವಯಸ್ಕರಲ್ಲಿ ಸಂಚಾರ ನಿಯಮಗಳ ಬಗ್ಗೆ ಹೇಗೆ ತಿಳಿವಳಿಕೆ ಮೂಡಿಸಬೇಕು ಎಂಬ ಬಗ್ಗೆ ಕೂಡ ತಿಳಿಸಿಕೊಡಲಾಗುತ್ತದೆ. ಮಕ್ಕಳಲ್ಲಿ ಶೈಕ್ಷಣಿಕ ಜ್ಞಾನದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಕೌಶಲ್ಯ ಬೆಳೆಸುವುದು ಈ ವಾಕಥಾನ್ ಹಿಂದಿರುವ ಉದ್ದೇಶ.

ಕಬ್ಬನ್ ಪಾರ್ಕ್‌ನಲ್ಲಿರುವ ಬಾಲಭವನದ ಬಳಿ ವಾಕಥಾನ್‌ಗೆ ಚಾಲನೆ ನೀಡಲಾಗುವುದು. ನಟಿ ಸಂಜನಾ, ರಾಧಿಕಾ ಪಂಡಿತ್ ಹಾಗೂ  ಸಂಚಾರ ಪೊಲೀಸರು ಪಾಲ್ಗೊಳ್ಳಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT