ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕ ಪಬ್ಲಿಕ್ ಟ್ರಸ್ಟ್ ಕಾಯ್ದೆ ಶೀಘ್ರ

Last Updated 22 ಫೆಬ್ರುವರಿ 2011, 18:20 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಇನ್ನು ಮುಂದೆ ಸಾಮಾಜಿಕ, ಶೈಕ್ಷಣಿಕ ಮತ್ತು ಧಾರ್ಮಿಕೇತರ ಟ್ರಸ್ಟ್‌ಗಳು ಒಂದೇ ಕಾಯ್ದೆ ವ್ಯಾಪ್ತಿಯಲ್ಲಿ ಬರಲಿದ್ದು, ಈ ನಿಟ್ಟಿನಲ್ಲಿ ಹೊಸದಾಗಿ ಕರ್ನಾಟಕ ಪಬ್ಲಿಕ್ ಟ್ರಸ್ಟ್ ಕಾಯ್ದೆ ಜಾರಿಗೊಳಿಸಲು ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಉದ್ದೇಶಿತ ಕರ್ನಾಟಕ ಪಬ್ಲಿಕ್ ಟ್ರಸ್ಟ್ ಕಾಯ್ದೆ-2011ಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದ್ದು, ಇದೇ 24ರಿಂದ ಆರಂಭವಾಗುವ ವಿಧಾನ ಮಂಡಲದ ಅಧಿವೇಶನದಲ್ಲಿ ಈ ಸಂಬಂಧ ಮಸೂದೆ ಮಂಡಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ವಿ.ಎಸ್.ಆಚಾರ್ಯ ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದರು.

ಹಿಂದೆ ಬೆಳಗಾವಿ, ಧಾರವಾಡ, ಹುಬ್ಬಳ್ಳಿ, ಹಾವೇರಿ, ಗದಗ, ವಿಜಾಪುರ, ಬಾಗಲಕೋಟೆ, ಉತ್ತರ ಕನ್ನಡ ಮೊದಲಾದ ಜಿಲ್ಲೆಗಳಲ್ಲಿ ಮುಂಬೈ ಪಬ್ಲಿಕ್ ಟ್ರಸ್ಟ್ ಕಾಯ್ದೆ-1950 ಜಾರಿಯಲ್ಲಿತ್ತು. ಆದರೆ 1997ರಲ್ಲಿ ಏಕರೂಪ ಹಿಂದೂ ಧಾರ್ಮಿಕ ದತ್ತಿ ಸಂಸ್ಥೆಗಳು ಮತ್ತು ಚಾರಿಟೆಬಲ್ ಕಾಯ್ದೆ ಜಾರಿಗೆ ಬಂದ ನಂತರ ಮುಂಬೈ ಕಾಯ್ದೆ ಅಸ್ತಿತ್ವ ಕಳೆದುಕೊಂಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT