ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ಕರ್ನಾಟಕ ಹಿತ' ಗೋಷ್ಠಿ

Last Updated 20 ಏಪ್ರಿಲ್ 2013, 19:49 IST
ಅಕ್ಷರ ಗಾತ್ರ

ಬೆಂಗಳೂರು:  ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯಕ್ಕೆ ಉತ್ತರ ಕಂಡುಕೊಳ್ಳುವ ಉದ್ದೇಶದಿಂದ ಕನ್ನಡ ಸಂಘರ್ಷ ಸಮಿತಿಯು  `ಒಕ್ಕೂಟ ವ್ಯವಸ್ಥೆ : ಕರ್ನಾಟಕದ ಹಿತ' ಕುರಿತು ಚಿಂತನಾಗೋಷ್ಠಿಯನ್ನು ಏ. 25ರಂದು ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು ಸಭಾಂಗಣದಲ್ಲಿ ಆಯೋಜಿಸಿದೆ.

`ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯಗಳನ್ನು ಇನ್ನೂ ಎಷ್ಟು ವರ್ಷ ಸಹಿಸಿಕೊಂಡು ಇರಬೇಕು? ಈ ಅನ್ಯಾಯಗಳಿಗೆ ಅಂತ್ಯ ಹೇಳುವುದು ಬೇಡವೇ? ಒಕ್ಕೂಟ ವ್ಯವಸ್ಥೆಯಲ್ಲಿ ನಾವು ಯಾವ ಕಾರಣಕ್ಕಾಗಿ ವಿಶ್ವಾಸವನ್ನು ಇಟ್ಟುಕೊಳ್ಳಬೇಕು? ಕರ್ನಾಟಕ ಪ್ರತ್ಯೇಕ ರಾಷ್ಟ್ರವಾದರೆ ಮಾತ್ರ ಕನ್ನಡ ಭಾಷೆಯನ್ನು ಉಳಿಸಿಕೊಳ್ಳಲು ಸಾಧ್ಯವಲ್ಲವೇ? ಕನ್ನಡಿಗರ ಹಿತವನ್ನು ಕಾಯಲು ಹಾಗೂ ಕರ್ನಾಟಕದ ಘನತೆಯನ್ನು ಎತ್ತಿಹಿಡಿಯಲು ಸಾಧ್ಯವಲ್ಲವೇ?' ಈ ಎಲ್ಲ ಪ್ರಶ್ನೆಗಳ ಬಗ್ಗೆ ಗೋಷ್ಠಿಯಲ್ಲಿ ಚರ್ಚೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT