ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕದ ಇಬ್ಬರು ಸೇರಿದಂತೆ 27 ಮಂದಿಗೆ ಯುವ ಪ್ರಶಸ್ತಿ

Last Updated 4 ಜುಲೈ 2013, 19:59 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಕರ್ನಾಟಕದ ಲಕ್ಷ್ಮೀನಾರಾಯಣ ಕಜೆಗದ್ದೆ ಮತ್ತು ಬಿ. ಹನುಮಂತಪ್ಪ ಸೇರಿದಂತೆ 27 ಮಂದಿ ಯುವಕರು ಹಾಗೂ ಪಶ್ಚಿಮ ಬಂಗಾಳದ ಸಂಸ್ಥೆಯೊಂದಕ್ಕೆ 2011-12ನೇ ಸಾಲಿನ ರಾಷ್ಟ್ರೀಯ ಯುವ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಗುರುವಾರ ಇಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಸಮಾಜ ಸೇವೆ ಮತ್ತು ವಿವಿಧ ಕ್ಷೇತ್ರಗಳಲ್ಲಿ ಯುವಕರ ಅಭಿವೃದ್ಧಿಗೆ ವಿಶಿಷ್ಟ ಕೊಡುಗೆ ನೀಡಿರುವವರಿಗೆ ಈ ಪ್ರಶಸ್ತಿ ನೀಡಲಾಗುತ್ತದೆ.

1985ರಿಂದ ಈ ಪ್ರಶಸ್ತಿ ನೀಡಲಾಗುತ್ತಿದೆ. ಇದೇ ಮೊದಲ ಬಾರಿಗೆ ರಾಷ್ಟ್ರಪತಿ ಅವರು ರಾಷ್ಟ್ರೀಯ ಯುವ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಕ್ರೀಡಾ ಸಚಿವ ಜಿತೇಂದ್ರ ಸಿಂಗ್ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

ಪ್ರಶಸ್ತಿಯು ಬೆಳ್ಳಿ ಪದಕ, 40,000 ರೂಪಾಯಿ ನಗದು ಮತ್ತು ಪ್ರಮಾಣ ಪತ್ರ ಒಳಗೊಂಡಿದೆ. ಯಾವುದಾದರೂ ಒಂದು ಸಂಘಟನೆಗೆ 2 ಲಕ್ಷ ರೂಪಾಯಿ ಪ್ರಶಸ್ತಿ ನೀಡಲಾಗುವುದು.

ಪ್ರಶಸ್ತಿಗೆ ಮೊದಲು ರಾಜ್ಯಮಟ್ಟದಲ್ಲಿ ಆಯ್ಕೆ ಮಾಡಲಾಗುತ್ತದೆ. ಬಳಿಕ ಜಂಟಿ ಕಾರ್ಯದರ್ಶಿಯವರನ್ನು ಒಳಗೊಂಡ ರಾಷ್ಟ್ರೀಯ ಮಟ್ಟದ  ಪರಿಶೀಲನಾ ಸಮಿತಿ ಹೆಸರನ್ನು ಸರ್ಕಾರಕ್ಕೆ ಶಿಫಾರಸು ಮಾಡುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT