ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಿಕಾ ಮೇಳ: ಆಸಕ್ತಿ ಕ್ಷೇತ್ರ ಗುರುತಿಸಿ

Last Updated 27 ಜನವರಿ 2012, 19:30 IST
ಅಕ್ಷರ ಗಾತ್ರ

ಕೃಷ್ಣರಾಜಪುರ: ವಿವಿಧ ಕಲಿಕಾ ಮೇಳಗಳಲ್ಲಿ ತೊಡಗಿಸುವ ಮೂಲಕ ಮಕ್ಕಳಲ್ಲಿರುವ ಪ್ರತಿಭೆ, ಆಸಕ್ತಿಯ ಕ್ಷೇತ್ರಗಳನ್ನು ಸುಲಭವಾಗಿ ಗುರುತಿಸಬಹುದು ಎಂದು ಲಿಟ್ಲ್ ಗ್ಲೂಮ್ ಶಾಲೆಯ ಕಾರ್ಯದರ್ಶಿ ಸರಸ್ವತಿ ಅಭಿಪ್ರಾಯಪಟ್ಟರು.
 
ಸಮೀಪದ ದೇವಸಂದ್ರದ ಚೈತನ್ಯ ಪದವಿ ಪೂರ್ವ ಕಾಲೇಜಿನಲ್ಲಿ ಶಾಲೆ ವತಿಯಿಂದ ಆಯೋಜಿಸಿದ್ದ ಬಾಲ ಮೇಳ- ಕಲಿಕಾ ಮಳಿಗೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಣ ಇಲಾಖೆಯ `ಮಾಡುತ್ತಾ ಕಲಿ~ ಎನ್ನುವ ತತ್ವದ ಆಧಾರದ ಮೇಲೆ ನಡೆಯುವ ಬಾಲ ಮೇಳಗಳಲ್ಲಿ ಪೋಷಕರನ್ನು ಸಹಾ ತೊಡಗಿಸಬೇಕು ಎಂದು ಅವರು ಹೇಳಿದರು.

ಇಂಡೋ- ಅಮೇರಿಕನ್ ಸಂಸ್ಥೆಯ ಲಲಿತ ಪ್ರಸಾದ್, ಸಾಮಾಜಿಕ ಕಾರ್ಯಕರ್ತ ಸುಧಾಕರ್, ಲೋಕೇಶ್, ಮುಖ್ಯ ಶಿಕ್ಷಕಿ ಮಂಜುಳಾ ಸೇರಿದಂತೆ ಸಿಬ್ಬಂದಿ ವರ್ಗದವರು ಉಪಸ್ಥಿತ ರಿದ್ದರು. ಮೇಳದಲ್ಲಿ ವಿವಿಧ 55 ಕಲಿಕಾ ಮಳಿಗೆಗಳನ್ನು ತೆರೆಯಲಾಗಿತ್ತು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT