ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲ್ಮಾಡಿ ಹೇಳಿಕೆಗೆ ಅಜಯ್ ಮಾಕನ್ ತಿರುಗೇಟು

Last Updated 15 ಜುಲೈ 2012, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಲಂಡನ್ ಒಲಿಂಪಿಕ್‌ಗೆ ಭಾರತ ಒಲಿಂಪಿಕ್ ಸಂಸ್ಥೆ ಮಾಜಿ ಅಧ್ಯಕ್ಷ ಸುರೇಶ್ ಕಲ್ಮಾಡಿ ತೆರಳುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಕೇಂದ್ರ ಕ್ರೀಡಾ ಸಚಿವ ಅಜಯ್ ಮಾಕನ್ ಈಗಲೂ ನನ್ನ ನಿಲುವಿಗೆ  ಬದ್ಧ~ ಎಂದು ಪುನರುಚ್ಚರಿಸಿದ್ದಾರೆ. ಅಷ್ಟೇ ಅಲ್ಲ ಕಲ್ಮಾಡಿ ನನ್ನ ರಾಜೀನಾಮೆ ಕೇಳಿರುವುದು ಅಸಂಬದ್ಧ ಎಂದು ತಿರುಗೇಟು ನೀಡಿದ್ದಾರೆ.

`ಲಂಡನ್‌ಗೆ ತೆರಳಲು ನ್ಯಾಯಾಲಯವೇ ಅನುಮತಿ ನೀಡಿದೆ. ನನ್ನನ್ನು ತಡೆಯಲು ಮಾಕನ್ ಯಾರು. ನನ್ನ ವಿರುದ್ಧ ವಿನಾಕಾರಣ ಅಪಪ್ರಚಾರ ಮಾಡುತ್ತಿದ್ದಾರೆ~ ಎಂದು ಕಲ್ಮಾಡಿ ಶನಿವಾರ ಆಕ್ರೋಶ ವ್ಯಕ್ತಪಡಿಸಿದ್ದರು.

`ಕಲ್ಮಾಡಿ ವಿಷಯವಾಗಿ ಅಂತರರಾಷ್ಟ್ರೀಯ ಒಲಿಂಪಿಕ್ ಸಂಸ್ಥೆ ಹಾಗೂ ಅಂತರರಾಷ್ಟ್ರೀಯ ಅಥ್ಲೆಟಿಕ್ಸ್ ಫೆಡರೇಷನ್ ಬಳಿ ಮಾತನಾಡುತ್ತೇನೆ. ನಿನ್ನ ಮೇಲಿರುವ ಆರೋಪಗಳಿಂದ ಮುಕ್ತವಾಗುವ ತನಕ ಹೋಗದಿರುವಂತೆ ಕಲ್ಮಾಡಿಗೆ ಸಲಹೆ ನೀಡುತ್ತೇನೆ~ ಎಂದು ಮಾಕನ್ ಹೇಳಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT