ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲ್ಲಿದ್ದಲು ಕೊರತೆ; ವಿದ್ಯುತ್ ಉತ್ಪಾದನೆ ಕುಂಠಿತ: ಫಿಕ್ಕಿ

Last Updated 10 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಕಲ್ಲಿದ್ದಲು ಮತ್ತು ಇಂಧನ ಕೊರತೆಯಿಂದಾಗಿ ದೇಶದ ವಿದ್ಯುತ್ ಉತ್ಪಾದನೆ ಕ್ಷೇತ್ರದಲ್ಲಿ ಸುಮಾರು ರೂ. 1 ಲಕ್ಷ ಕೋಟಿಗಳಷ್ಟು ಮೊತ್ತದ ಹೂಡಿಕೆ ನೆನೆಗುದಿಗೆ ಬಿದ್ದಿದೆ ಎಂದು ಭಾರತೀಯ ವಾಣಿಜ್ಯೋದ್ಯಮ ಮಹಾಸಂಘಗಳ ಒಕ್ಕೂಟದ (ಫಿಕ್ಕಿ)  ವರದಿ ತಿಳಿಸಿದೆ.

ವಿದ್ಯುತ್ ಉತ್ಪಾದನೆ ಕ್ಷೇತ್ರದ ಭಾಗಶಃ ಹೂಡಿಕೆಗಳು ಸ್ಥಗಿತಗೊಂಡಿವೆ. ಇದರ ಜತೆಗೆ, ಕಲ್ಲಿದ್ದಲು ಮತ್ತು ಅನಿಲ ಸಂಪರ್ಕ ಕೊರತೆಯಿಂದ  25 ಸಾವಿರ ಮೆಗಾವಾಟ್ ಸಾಮರ್ಥ್ಯದ ಶಾಖೋತ್ಪನ್ನ ವಿದ್ಯುತ್ ಉತ್ಪಾದನಾ ಘಟಕಗಳೂ ಕಾರ್ಯನಿರ್ವಹಿಸುತ್ತಿಲ್ಲ ನಿಲ್ಲಿಸಿದೆ ಎಂದು `ಫಿಕ್ಕಿ~ ಹೇಳಿದೆ. ಕಲ್ಲಿದ್ದಲು ಪೂರೈಕೆ ಸಮಪರ್ಕವಾಗಿ ಇಲ್ಲದ ಕಾರಣ ಹಲವು ವಿದ್ಯುತ್ ಉತ್ಪಾದನಾ ಘಟಕಗಳು ತೀವ್ರ ಸಮಸ್ಯೆ ಎದುರಿಸುತ್ತಿವೆ ಎಂದು ವರದಿಯಲ್ಲಿ  ತಿಳಿಸಲಾಗಿದೆ.

ಇಂಧನ ಸಚಿವಾಲಯವು 12ನೇ ಪಂಚವಾರ್ಷಿಕ ಯೋಜನಾ ಅವಧಿಯಲ್ಲಿ ಹೆಚ್ಚುವರಿಯಾಗಿ  78 ಸಾವಿರ ಮೆಗಾ ವಾಟ್ ವಿದ್ಯುತ್ ಉತ್ಪಾದಿಸುವ  ಗುರಿ ಹೊಂದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT