ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲ್ಲಿದ್ದಲು ಹಗರಣ ಮುಚ್ಚಿಹಾಕಲು ಪ್ರಯತ್ನಿಸುತ್ತಿಲ್ಲ- ಸಿಂಗ್

Last Updated 3 ಸೆಪ್ಟೆಂಬರ್ 2013, 10:08 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಸರ್ಕಾರವು ಕಲ್ಲಿದ್ದಲು ಪರವಾನಿಗೆ ಹಂಚಿಕೆ ಹಗರಣವನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿಲ್ಲ ಎಂದು ಪ್ರಧಾನಿ ಮನಮೋಹನ್ ಸಿಂಗ್ ಮಂಗಳವಾರ ರಾಜ್ಯಸಭೆಯಲ್ಲಿ ಸ್ಪಷ್ಟಪಡಿಸಿದರು.

ಹಗರಣಕ್ಕೆ ಸಂಬಂಧಿಸಿದ ಕಡತಗಳನ್ನು ಸರ್ಕಾರವೇ ನಾಪತ್ತೆ ಮಾಡಿಸಿದೆ ಎಂಬ ವಿರೋಧ ಪಕ್ಷಗಳು ಆರೋಪದಲ್ಲಿ ಹುರುಳಿಲ್ಲ ಎಂದು ಸಿಂಗ್  ತಿಳಿಸಿದರು,

ನಾಪತ್ತೆಯಾಗಿರುವ ಕಡತಗಳನ್ನು ಪತ್ತೆಹಚ್ಚುವ ಕಾರ್ಯದಲ್ಲಿ ಸಿಬಿಐ ನಿರತವಾಗಿದೆ ಎಂದು ಸಿಂಗ್ ವಿವರಿಸಿದರು. ಈ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಮುಂದುವರೆಸಿದೆ. ಚಳಿಗಾಲದ ಅಧಿವೇಶದ ವೇಳೆಗೆ ತನಿಖೆ ಪೂರ್ಣಗೊಳ್ಳಲಿದೆ ಎಂಬ ವಿಶ್ವಾಸವನ್ನು ಸಿಂಗ್ ವ್ಯಕ್ತಪಡಿಸಿದರು.

ನಾಳೆಯಿಂದ ಆರಂಭವಾಗಲಿರುವ ಜಿ-20ರ ಶೃಂಗ ಸಭೆಯಲ್ಲಿ ಭಾಗವಹಿಸಲು ಇಂದು ರಾತ್ರಿ ಸಿಂಗ್ ರಷ್ಯಾಗೆ ತೆರಳಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT