ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲ್ಲು ಕ್ವಾರಿ ಪರವಾನಗಿ ರದ್ದು

Last Updated 3 ಮಾರ್ಚ್ 2011, 10:10 IST
ಅಕ್ಷರ ಗಾತ್ರ

ಯಾದಗಿರಿ: ನಿಯಮ ಉಲ್ಲಂಘನೆ ಮಾಡಿ ನಡೆಸಲಾಗುತ್ತಿದ್ದ ಸುಮಾರು 18 ಕಲ್ಲು ಕ್ವಾರಿಗಳ ಪರವಾನಗಿ ಯನ್ನು ಜಿಲ್ಲಾಧಿಕಾರಿಗಳು ರದ್ದು ಪಡಿ ಸಿದ್ದು, ಬುಧವಾರ ಬೆಳಿಗ್ಗೆಯಿಂದಲೇ ಪೊಲೀಸರ ರಕ್ಷಣೆಯಲ್ಲಿ ಕ್ವಾರಿಗಳ ಸಾಮಗ್ರಿಗಳನ್ನು ತೆರವುಗೊಳಿಸಲಾ ಯಿತು.

ನಗರದ ಹೊರವಲಯ, ವರ್ಕ ನಳ್ಳಿ, ಸೈದಾಪುರ ಸೇರಿದಂತೆ ವಿವಿಧೆಡೆ ನಡೆಸಲಾಗುತ್ತಿದ್ದ ಕಲ್ಲು ಗಣಿಗಾರಿಕೆಯ ಬಗ್ಗೆ ಅನೇಕ ದೂರುಗಳು ಬಂದ ಹಿನ್ನೆಲೆಯಲ್ಲಿ ಹಠಾತ್ತಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಜಿಲ್ಲಾಧಿ ಕಾರಿ ಡಾ. ಕೆ.ಜಿ. ಜಗದೀಶ ನೇತೃತ್ವದ ಅಧಿಕಾರಿಗಳ ತಂಡ, ನಿಯಮ ಉಲ್ಲಂಘಿಸಿದ 14, ಸರ್ಕಾರಿ ಜಾಗೆಯಲ್ಲಿ ನಡೆಸುತ್ತಿದ್ದ ಎರಡು ಹಾಗೂ ಅವಧಿ ಮುಗಿದಿರುವ ಎರಡು ಕಲ್ಲು ಕ್ವಾರಿಗಳನ್ನು ಸ್ಥಗಿತಗೊಳಿಸಲು ಆದೇಶ ನೀಡಿದೆ.

ಸುಪ್ರೀಂ ಕೋರ್ಟ್‌ನ ನಿರ್ದೇಶನ ಗಳ ಉಲ್ಲಂಘನೆ ಮಾಡಿರುವ 14 ಕಲ್ಲು ಕ್ವಾರಿಗಳಿಂದ ಸಾರ್ವಜನಿಕರಿಗೆ ಹಾಗೂ ಶಾಲೆ ಮಕ್ಕಳಿಗೆ ತೊಂದರೆ ಆಗುತ್ತಿರುವ ಹಿನ್ನೆಲೆಯಲ್ಲಿ ದೂರು ಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ ತಂಡಕ್ಕೆ, ನಿಯಮ ಉಲ್ಲಂಘನೆ ಮಾಡಿ ರುವುದು ಸ್ಪಷ್ಟವಾದ ಹಿನ್ನೆಲೆಯಲ್ಲಿ ಪರವಾನಗಿ ರದ್ದುಗೊಳಿಸಲಾಗಿದೆ.

ಸರ್ಕಾರಿ ಜಾಗೆಯಲ್ಲಿ ಎರಡು ಕಲ್ಲು ಕ್ವಾರಿಗಳು ನಡೆಯುತ್ತಿರುವುದನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಈ ಬಗ್ಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪನಿರ್ದೇಶಕರ ಮೇಲೆ ಕ್ರಮಕ್ಕೆ ಶಿಫಾರಸು ಮಾಡಿದ್ದಾರೆ. ಅಲ್ಲದೇ ಅವಧಿ ಮುಗಿದಿದ್ದರೂ ಎರಡು ಕ್ವಾರಿಗಳು ಈಗಲೂ ನಡೆ ಯುತ್ತಿರುವ ಹಿನ್ನೆಲೆಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ವಿರುದ್ಧವೂ ಕ್ರಮಕ್ಕೆ ಶಿಫಾರಸು ಮಾಡಲಾಗಿದೆ.

ಬುಧವಾರ ನಗರಸಭೆ, ಕಂದಾಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಪೊಲೀಸ ರಕ್ಷಣೆಯಲ್ಲಿ ಕಲ್ಲು ಕ್ವಾರಿಗಳಿಗೆ ಬಳಸಲಾಗುತ್ತಿದ್ದ ಸಾಮಗ್ರಿಗಳನ್ನು ಜಪ್ತಿ ಮಾಡಿದ್ದು, ಯಂತ್ರೋಪಕರಣಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಅಲ್ಲದೇ ಅಲ್ಲಿರುವ ಜಲ್ಲಿ ಕಲ್ಲನ್ನು ನಿರ್ಮಿತಿ ಕೇಂದ್ರಕ್ಕೆ ಒಪ್ಪಿಸಲು ಸೂಚಿಸಲಾಗಿದೆ. ಕ್ವಾರಿಗಳಿಗೆ ನೀಡಲಾಗಿದ್ದ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ಜೆಸ್ಕಾಂಗೆ ಸೂಚನೆ ನೀಡಲಾಗಿದೆ. ಕಲ್ಲು ಕ್ವಾರಿ ಗಳು ನಡೆಯುತ್ತಿದ್ದ ಸ್ಥಳದಲ್ಲಿನ ಕಟ್ಟಡಗಳನ್ನು ತೆರವುಗೊಳಿಸಲಾ ಯಿತು.

ನಗರ ಪ್ರದೇಶದಿಂದ 15 ಕಿ.ಮೀ. ಆಚೆಗೆ ಕಲ್ಲು ಕ್ವಾರಿ ನಡೆಸಲು ಸ್ಥಳ ಆಯ್ಕೆ ಮಾಡಿದಲ್ಲಿ ಮುಂದಿನ ದಿನ ಗಳಲ್ಲಿ ಪರವಾನಗಿ ನೀಡಲಾಗುವುದು. ನಗರದ ಹೊರವಲಯದಲ್ಲಿ ನಡೆಯು ತ್ತಿರುವ ಕಲ್ಲು ಕ್ವಾರಿಗಳಿಂದ ಜನರಿಗೆ ತೊಂದರೆ ಆಗುತ್ತಿದ್ದು, ಪರಿಸರಕ್ಕೂ ತೊಂದರೆ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಪರವಾನಗಿ ರದ್ದು ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಕಲ್ಲು ಕ್ವಾರಿಗಳು ನಡೆಯುತ್ತಿರು ವುದರಿಂದ ಜನರು ಅನುಭವಿಸು ತ್ತಿರುವ ತೊಂದರೆಗಳ ಬಗ್ಗೆ ಕಳೆದ ನವೆಂಬರ್‌ನಲ್ಲಿ ‘ಪ್ರಜಾವಾಣಿ’ ಪತ್ರಿಕೆ ವರದಿ ಮಾಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT