ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಳಂಕಿತರ ವಿರುದ್ಧ ಪ್ರತಿಭಟನೆ

Last Updated 13 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಹೊಸಕೋಟೆ: ವಿಧಾನಸಭೆ ಅಧಿವೇಶನದಲ್ಲಿ ನಡೆದ `ಬ್ಲೂ ಫಿಲಂ~ ಪ್ರಕರಣವನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಇಲ್ಲಿನ ಕಾಂಗ್ರೆಸ್ ಕಚೇರಿಯಿಂದ ಮೆರವಣಿಗೆ ನಡೆಸಿದ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಹೆದ್ದಾರಿಯ ಪ್ರವಾಸಿ ಮಂದಿರ ವೃತ್ತದಲ್ಲಿ ಕೆಲಕಾಲ ರಸ್ತೆ ತಡೆ ನಡೆಸಿದರು. ಅಲ್ಲದೆ, ಮಾಜಿ ಸಚಿವರಾದ ಲಕ್ಷ್ಮಣ ಸವದಿ, ಸಿ.ಸಿ. ಪಾಟೀಲ್ ಮತ್ತು ಕೃಷ್ಣ ಪಾಲೇಮಾರ್ ಅವರ ಪ್ರತಿಕೃತಿ ದಹನ ಮಾಡಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ಎನ್.ನಾಗರಾಜು, `ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಒಂದಲ್ಲ ಒಂದು ಹಗರಣದಲ್ಲಿ ಸಿಲುಕುತ್ತಿದೆ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳೇ ಕುಂಠಿತಗೊಂಡಿದ್ದು, ಜನತೆ ವಿದ್ಯುತ್, ಕುಡಿಯುವ ನೀರು ಸೇರಿದಂತೆ ಹಲವು ಸಮಸ್ಯೆಗಳಿಂದ ಕಂಗೆಟ್ಟಿದ್ದಾರೆ~ ಎಂದು ಟೀಕಿಸಿದರು.ಆನಂತರ ಪ್ರತಿಭಟನಾಕಾರರು ತಾಲ್ಲೂಕು ಕಚೇರಿಗೆ ಮೆರವಣಿಗೆಯಲ್ಲಿ ತೆರಳಿ ತಹಸೀಲ್ದಾರರಿಗೆ ಮನವಿಪತ್ರ ಸಲ್ಲಿಸಿದರು.

ರಾಜ್ಯ ಅಲ್ಪಸಂಖ್ಯಾತರ ವಿಭಾಗದ ಸಂಚಾಲಕ ಸಗೀರ್ ಅಹಮದ್, ಕೆಪಿಸಿಸಿ ಸದಸ್ಯ ಕೆಂಚೇಗೌಡ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಕಮಲಾಕ್ಷಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿ.ಪ್ರಸಾದ್, ಕಲ್ಲಪ್ಪ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT