ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಳಪೆ ಕಾಮಗಾರಿ ವಿರುದ್ಧ ಕ್ರಮಕ್ಕೆ ಒತ್ತಾಯ

Last Updated 11 ಅಕ್ಟೋಬರ್ 2012, 5:35 IST
ಅಕ್ಷರ ಗಾತ್ರ

ರಾಯಚೂರು: ಮಾನ್ವಿ ತಾಲ್ಲೂಕಿನ ಕಲ್ಲೂರು ಗ್ರಾಮದ ಕೃಷಿ ಉತ್ಪನ್ನ ಮಾರುಕಟ್ಟೆಯ ಪ್ರಾಂಗಣದ ಕಂಪೌಂಡ್ ಗೋಡೆ ನಿರ್ಮಾಣ ಕಾಮಗಾರಿ ಕಳಪೆ ಮಟ್ಟದಿಂದ ಕೂಡಿದ್ದು, ಈ ಬಗ್ಗೆ ತನಿಖೆ ನಡೆಸಿ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವಿಎಸ್‌ಎಸ್‌ಎನ್ ಮಾಜಿ ಅಧ್ಯಕ್ಷ ಕೆ.ಸುಮಿತ್ರ ಅವರು ಒತ್ತಾಯಿಸಿದ್ದಾರೆ.

ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಅವರು, ಕೃಷಿ ಉತ್ಪನ್ನ ಮಾರುಕಟ್ಟೆಯ ಪ್ರಾಂಗಣಕ್ಕೆ  ಫೆನಿಂಗ್ ಸಿಮೆಂಟ್ ಕಂಬಗಳನ್ನು ತೆಗೆದು ಗುತ್ತಿಗೆದಾರರು ಮಾರಾಟ ಮಾಡಿದ್ದಾರೆ. ಹದ್ದುಬಸ್ತು ಇಲ್ಲದೇ ಗೋಡೆ ನಿರ್ಮಾಣ ಮಾಡಲಾಗುತ್ತಿದೆ ಎಂದು ಆಪಾದಿಸಿದ್ದಾರೆ.

ಕಳಪೆ ಕಾಮಗಾರಿ ಕೈಗೊಂಡಿರುವ ಗುತ್ತಿಗೆದಾರ ಹಾಗೂ ಕಿರಿಯ ಎಂಜಿನಿಯರ್, ಮಾನ್ವಿಯ ಕೃಷಿಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ವಿರುದ್ಧ ಕಾನೂನು ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ಪತ್ರದಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT