ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಳ್ಳ ಎಂದು ಭಾವಿಸಿ ಹಲ್ಲೆ: ವಿದ್ಯಾರ್ಥಿ ಸಾವು

Last Updated 1 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಪೂರ್ನಿಯಾ (ಪಿಟಿಐ): ಕಳ್ಳ ಎಂದು ಭಾವಿಸಿ ವ್ಯಕ್ತಿಗಳಿಬ್ಬರು ಒಂಬತ್ತನೇ ತರಗತಿ ವಿದ್ಯಾರ್ಥಿಯೊಬ್ಬನ ಮೇಲೆ ಹಲ್ಲೆ ನಡೆಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿಯು ಸಾವನ್ನಪ್ಪಿರುವ ಘಟನೆ ಕಸಬಾ ಪೊಲೀಸ್ ಠಾಣೆ ವ್ಯಾಪ್ತಿಯ ಬಲೂಟೊಲಾ ಪ್ರದೇಶದಲ್ಲಿ ಭಾನುವಾರ ನಡೆದಿದೆ.

ರೋಶನ್ ಕುಮಾರ್ ಮೃತಪಟ್ಟ ವಿಧ್ಯಾರ್ಥಿ. ಶಾಲೆಯಿಂದ ಮನೆಗೆ ಬರುತ್ತಿದ್ದ ವೇಳೆ ಭೀಮ್ ಮೆಹ್ತಾ ಮತ್ತು ಆತನ ಜತೆಯಿದ್ದ ವ್ಯಕ್ತಿಯೊಬ್ಬರು ಸೇರಿ ವಿದ್ಯಾರ್ಥಿ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ್ದಾರೆ.

ಆತನನ್ನು ಹತ್ತಿರದ ಸರ್ದಾರ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ವೇಳೆಗೆ ವಿದ್ಯಾರ್ಥಿ ಮೃತಪಟ್ಟಿರುವುದನ್ನು ವೈದ್ಯರು ಖಚಿತಪಡಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT