ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಳ್ಳಬಟ್ಟಿ ಮುಕ್ತ ರಾಜ್ಯ ಮಾಡಲು ಬದ್ಧ

Last Updated 19 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ಕಳ್ಳಬಟ್ಟಿ ಮುಕ್ತ ರಾಜ್ಯ ಮಾಡಲು ಬದ್ಧ ಇರುವುದಾಗಿ ಹೇಳಿ ರುವ ಅಬಕಾರಿ ಸಚಿವ ಎಂ.ಪಿ. ರೇಣು ಕಾಚಾರ್ಯ ಅವರು ಈ ದಂಧೆ ಯಿಂದ ಹೊರಬರುವ ಜನರಿಗೆ ಪುನ ರ್ವಸತಿ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.

ಕಳ್ಳಬಟ್ಟಿ ದಂದೆ ನಿಲ್ಲಿಸಿ, ಸಮಾಜದ ಮುಖ್ಯವಾಹಿನಿಗೆ ಬರುವ ಜನರಿಗೆ ಇದರ ಅನುಕೂಲ ಕಲ್ಪಿಸಲಾಗುವುದು. ಈ ಕುರಿತ ಸಮೀಕ್ಷೆಗೆ ಆದೇಶ ನೀಡಿದ್ದು, 15 ದಿನಗಳಲ್ಲಿ ವರದಿ ಲಭ್ಯವಾಗಲಿದೆ ಎಂದರು. ಅಬಕಾರಿ ಇಲಾಖೆಯ ಪ್ರಗತಿ ಪರಿಶೀಲನೆ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.
ಅಂಬೇಡ್ಕರ್ ಅಭಿವೃದ್ಧಿ ನಿಗಮ, ಬಂಜಾರ ಅಭಿವೃದ್ಧಿ ನಿಗಮ, ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮ,

ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಅಲ್ಪಸಂಖ್ಯಾತ ಅಭಿವದ್ಧಿ ನಿಗಮಗಳ ಮೂಲಕ ಪುನ ರ್ವಸತಿ ಕಲ್ಪಿಸಲಾಗುವುದು ಎಂದು ಹೇಳಿದರು. ಕಳ್ಳಬಟ್ಟಿ ದಂದೆ ಹೆಚ್ಚಾಗಿ ಬೆಳಗಾವಿ, ಬಾಗಲಕೋಟೆ, ಕಾರವಾರ ಮುಂತಾಡೆಡೆ ಇದೆ. ಇಂತಹ ಕಡೆ ಪುನರ್ವಸತಿಗೆ ಒತ್ತು ನೀಡಲು ನಿರ್ಧರಿಸಲಾಗಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ, ಮಂಡ್ಯ, ಮೈಸೂರು, ರಾಮನಗರ, ಉಡುಪಿ, ಚಾಮರಾಜನಗರ, ಕೊಪ್ಪಳ ಜಿಲ್ಲೆಗ ಳನ್ನು ಕಳ್ಳಬಟ್ಟಿ ಮುಕ್ತ ಜಿಲ್ಲೆಗಳೆಂದು ಘೋಷಣೆ ಮಾಡಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT