ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಸಾಯಿಖಾನೆಗೆ ಸಾಗಿಸುತ್ತಿದ್ದ ಜಾನುವಾರುಗಳ ರಕ್ಷಣೆ

Last Updated 2 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಚನ್ನಪಟ್ಟಣ: ಕಸಾಯಿಖಾನೆಗೆ ಜಾನುವಾರುಗಳನ್ನು ಲಾರಿಗಳಲ್ಲಿ ಸಾಗಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಇಲ್ಲಿನ ಗ್ರಾಮಾಂತರ ಪೊಲೀಸರು ಮೂವರನ್ನು ಬಂಧಿಸಿ, 45ಕ್ಕೂ ಹೆಚ್ಚು ಹಸು, ಎಮ್ಮೆಗಳನ್ನು ರಕ್ಷಿಸಿದ್ದಾರೆ.

ಬೆಂಗಳೂರು-ಮೈಸೂರು ಹೆದ್ದಾರಿಯ ಕೆಂಗಲ್ ರೈಲ್ವೆ ಮೇಲು ಸೇತುವೆ ಬಳಿ ಎಎಸ್ಪಿ ಶಂತನು ಸಿನ್ಹಾ ನೇತೃತ್ವದ ಗ್ರಾಮಾಂತರ ಠಾಣಾ ಪೊಲೀಸರ ತಂಡ ಕೆಎ-28, 5147 ಮತ್ತು ಕೆಎ-06, 1366 ನಂಬರಿನ ಎರಡು ಲಾರಿಗಳನ್ನು ತಡೆದು ಜಾನುವಾರುಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಈ ಸಂಬಂಧ ಮಂಡ್ಯದ ಬಾಬು, ಮುನಾವರ್ (ಮಂಡ್ಯ 31ನೇ ವಾರ್ಡ್‌ನ ನಗರಸಭೆ ಮಾಜಿ ಸದಸ್ಯ), ಆಸೀಫ್, ವಸೀಮ್, ಮೈಸೂರಿನ ನಯೀಮ್ ಪಾಷಾ, ಷಫಿ, ಚನ್ನಪಟ್ಟಣದ ಹನುಮಂತ ಸೇರಿದಂತೆ ಏಳು ಜನರ ವಿರುದ್ಧ ದೂರು ದಾಖಲಿಸಿರುವ ಪೊಲೀಸರು, ಷಫಿ, ಅಸೀಫ್, ಹನುಮಂತ ಅವರನ್ನು ಬಂಧಿಸಿದ್ದಾರೆ.

ಮಂಡ್ಯ, ಮೈಸೂರಿನ ಈ ದನಗಳನ್ನು ಹೊಸೂರು ಮೂಲಕ ಕೇರಳಕ್ಕೆ ಸಾಗಿಸಲಾಗುತ್ತಿತ್ತು ಎನ್ನಲಾಗಿದೆ.  ಗೋ ಹತ್ಯೆ ಕಾಯ್ದೆ ಪ್ರಕಾರ ಈ ಏಳು ಜನರ ವಿರುದ್ಧ ದೂರು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಶಪಡಿಸಿಕೊಂಡಿರುವ ಜಾನುವಾರುಗಳನ್ನು ಮೈಸೂರಿನ ಗೋ ಶಾಲೆಗೆ ತಲುಪಿಸಲಾಗುವುದು ಎಂದು ಗ್ರಾಮಾಂತರ ಎಸೈ ನರಸಿಂಹಮೂರ್ತಿ ತಿಳಿಸಿದ್ದಾರೆ.

ಬೈರಾಪಟ್ಟಣ: ಅವ್ಯವಸ್ಥೆ ಪರಿಶೀಲನೆ
ಚನ್ನಪಟ್ಟಣ: ವಿದ್ಯಾರ್ಥಿನಿಲಯದ ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿಗಳು ಉಪವಾಸ ಸತ್ಯಾಗ್ರಹ ನಡೆಸಿದ್ದ ತಾಲ್ಲೂಕಿನ ಬೈರಾಪಟ್ಟಣ ಸರ್ಕಾರಿ ವಿದ್ಯಾರ್ಥಿ ನಿಲಯಕ್ಕೆ ಜಿ.ಪಂ. ಅಧ್ಯಕ್ಷೆ ನಾಗೇಶ್ವರಿ ಗುರುವಾರ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆಗಳನ್ನು ಪರಿಶೀಲಿಸಿದರು.

ವಿದ್ಯಾರ್ಥಿಗಳ ಅಹವಾಲುಗಳನ್ನು ಕೇಳಿದ ನಾಗೇಶ್ವರಿ, ಸಮಸ್ಯೆಗಳನ್ನು ಪರಿಹರಿಸಲು ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ನಿಲಯಪಾಲಕರ ವಿರುದ್ಧ ವಿದ್ಯಾರ್ಥಿಗಳು ದೂರು ಹೇಳಿದಾಗ ಒಂದು ವಾರದೊಳಗೆ ಅವರನ್ನು ಬದಲಾಯಿಸಲು ಅಧಿಕಾರಿಗಳ ಜೊತೆ ಚರ್ಚಿಸುವುದಾಗಿ ತಿಳಿಸಿದರು.

ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ತಿಮ್ಮಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆಯ ವೆಂಕಟೇಶ್ ಮತ್ತಿತರರು ಈ ಸಂದರ್ಭದಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT