ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ

Last Updated 19 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಯಲಹಂಕ:  ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಯೋಜನೆಯಡಿಯಲ್ಲಿ ಸಾದೇನಹಳ್ಳಿ ಬಡಾವಣೆಯಲ್ಲಿ ಕಾಂಕ್ರೀಟ್ ರಸ್ತೆ ಅಭಿವೃದ್ಧಿ ಕಾಮಗಾರಿಗೆ  ಶಾಸಕ ಎಸ್. ಆರ್. ವಿಶ್ವನಾಥ್ ಗುದ್ದಲಿಪೂಜೆ ನೆರವೇರಿಸಿದರು.

ನಂತರ ಮಾತನಾಡಿದ ಅವರು, ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಯೋಜನೆಯಡಿ 2.25 ಕೋಟಿ ರೂಪಾಯಿ ವೆಚ್ಚದಲ್ಲಿ ಸಾದೇನಹಳ್ಳಿ ಮತ್ತು ಬಡಾವಣೆ, ಸುರಧೇನುಪುರ ಮತ್ತು ಕಾಲೋನಿ, ಕಡತನ ಮಲೆ, ಕಕ್ಕೆಹಳ್ಳಿ, ಮಾರಸಂದ್ರ ಹಾಗೂ ನೆಲ್ಲುಕುಂಟೆ ಗ್ರಾಮಗಳ ಪರಿಮಿತಿಯಲ್ಲಿ ರಸ್ತೆ, ಚರಂಡಿ ಮತ್ತು ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವ ಅಭಿವೃದ್ಧಿ ಕಾಮಗಾರಿಗೆ ಇತ್ತೀಚೆಗೆ ಗುದ್ದಲಿಪೂಜೆ ನೆರವೇರಿಸಲಾಗಿದೆ ಎಂದು ಹೇಳಿದರು.

ಗ್ರಾಮೀಣ ಪ್ರದೇಶಗಳಲ್ಲಿಯೂ ಸಹ ನಗರದ ಮಾದರಿಯಲ್ಲಿ ಗುಣಮಟ್ಟದ ಕಾಂಕ್ರೀಟ್ ರಸ್ತೆ ಹಾಗೂ ಚರಂಡಿ ವ್ಯವಸ್ಥೆಯನ್ನು ಕಲ್ಪಿಸುವ ನಿಟ್ಟಿನಲ್ಲಿ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ವಿಶೇಷವಾಗಿ ಪರಿಶಿಷ್ಟ ಜಾತಿ- ಪಂಗಡದ ಕಾಲೋನಿಗಳಲ್ಲಿ ಅಭಿವೃದ್ಧಿ ಕಾಮಗಾರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಮೂರು ತಿಂಗಳ ಒಳಗಾಗಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜಿ.ಪಂ. ಸದಸ್ಯರಾದ ವಾಣಿಶ್ರೀ ವಿಶ್ವನಾಥ್, ಭಾರತಿ ವೆಂಕಟೇಶ್, ತಾಲ್ಲೂಕು ಪಂಚಾಯ್ತಿ ಸದಸ್ಯೆ ಅನ್ನಪೂರ್ಣ ವೀರಭದ್ರಯ್ಯ, ಬೆಂಗಳೂರು ಹಾಲು ಒಕ್ಕೂಟದ ಅಧ್ಯಕ್ಷ ದಿಬ್ಬೂರು ಜಯಣ್ಣ, ನಗರ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಜಣ್ಣ, ರಾಮಲಿಂಗೇಗೌಡ ಮೊದಲಾದವರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT