ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್-ಬಿಜೆಪಿ ತಿರಸ್ಕರಿಸಲು ಕರೆ

Last Updated 17 ಫೆಬ್ರುವರಿ 2012, 9:45 IST
ಅಕ್ಷರ ಗಾತ್ರ

ರಾಮದುರ್ಗ: `ಕರ್ನಾಟಕದಲ್ಲಿ ಐದು ವರ್ಷಗಳ ಕಾಲ ಸ್ವತಂತ್ರವಾಗಿ ಸರ್ಕಾರ ನಡೆಸಲು ಜೆಡಿಎಸ್ ಪಕ್ಷಕ್ಕೆ ಒಮ್ಮೆ ಅಧಿಕಾರ ನೀಡಿದರೆ, ರಾಜ್ಯದಲ್ಲಿ ಪರಿವರ್ತನೆ ತರುವುದನ್ನು ಪರೀಕ್ಷಿಸಿ ನೋಡಬಹುದು~ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಜೆಡಿಎಸ್ ಕಾರ್ಯಕರ್ತರ ತಾಲ್ಲೂಕು ಮಟ್ಟದ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಹಿಂದೆಂದೂ ಕಂಡರಿಯದಷ್ಟು ಕೆಟ್ಟ ಆಡಳಿತ ನೀಡುತ್ತಿರುವ ಬಿಜೆಪಿ ಪಕ್ಷವನ್ನು ಮತ್ತು ಕೇಂದ್ರದಲ್ಲಿ ನಿರಾಳ ಭಾವದ ಆಡಳಿತ ನಡೆಸಿರುವ ಕಾಂಗ್ರೆಸ್ ಪಕ್ಷವನ್ನು ಮುಂಬರುವ ಚುನಾವಣೆಯಲ್ಲಿ ಸೋಲಿಸಬೇಕು ಎಂದು ಕರೆ ನೀಡಿದರು.

`ಕೇವಲ 20 ತಿಂಗಳ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ತಮ್ಮ ಆಡಳಿತದಲ್ಲಿ ರೈತರ, ಬಡವರ ಮತ್ತು ದೀನ ದಲಿತರ ಉದ್ಧಾರಕ್ಕಾಗಿ ರೂಪಿಸಿದ ಅನೇಕ ಯೋಜನೆಗಳನ್ನು ಬಿಜೆಪಿ ಸರ್ಕಾರ ಗಾಳಿಗೆ ತೂರಿದೆ. ಬಿಜೆಪಿ, ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ 20 ತಿಂಗಳ ನಂತರ ಯಡಿಯೂರಪ್ಪ ಅವರಿಗೆ ಅಧಿಕಾರ ಬಿಟ್ಟು ಕೊಡಲಿಲ್ಲ ಎಂಬ ಒಂದೇ ಕಾರಣದಿಂದ ಅಧಿಕಾರಕ್ಕೆ ಬಂದಿರುವ ಬಿಜೆಪಿ ಕೇವಲ ಭ್ರಷ್ಟಾಚಾರದ ಮೂಲಕ ಹಣ ಗಳಿಕೆಯಲ್ಲಿ ತೊಡಗಿದೆ. ಅಂಥವರನ್ನು ಮುಂಬರುವ ಚುನಾವಣೆಯಲ್ಲಿ ಸೋಲಿಸಿ ತಕ್ಕ ಪಾಠ ಕಲಿಸಬೇಕು~ ಎಂದು ನುಡಿದರು.
 

ಪ್ರಮಾಣವಚನದ ವೇಳೆ ರೈತರ ಹೆಸರಿನಲ್ಲಿ ಅಧಿಕಾರ ಸ್ವೀಕರಿಸಿದ ಬಿಜೆಪಿ ರೈತರಿಗಾಗಿ ಪ್ರತ್ಯೇಕ ಬಜೆಟ್ ಮಂಡಿಸಿತ್ತು. ಆದರೆ ರೈತರ ಸಂಕಷ್ಟಗಳಿಗೆ ಸ್ಪಂದಿಸುವ ಯಾವುದೇ ಯೋಜನೆಯನ್ನು ಬಿಜೆಪಿ ಸರ್ಕಾರ ಕೈಗೊಂಡಿಲ್ಲ. ರೈತರು ಬೆಳೆಯುವ ಬೆಳೆಗಳಿಗೆ ಖರ್ಚಿಗೆ ಸಮನಾದ ಬೆಂಬಲ ಬೆಲೆ ನೀಡದೇ ಸಂಕಷ್ಟದಲ್ಲಿ ನೂಕಿದೆ ಎಂದು ದೂರಿದರು.

ಬಿಜೆಪಿಯ ಆಡಳಿತದಲ್ಲಿ ರೈತ ಪರವಾದ ಯೋಜನೆಗಳು ಬರಬಹುದು ಎಂದು ರೈತ ಮುಖಂಡರು ಇಟ್ಟುಕೊಂಡಿದ್ದ ವಿಶ್ವಾಸಕ್ಕೆ ಬಿಜೆಪಿ ಆಡಳಿತದಲ್ಲಿ ವಿಶ್ವಾಸಘಾತವಾಗಿದೆ. ರಾಜ್ಯದ ರೈತರ ಸಾಲವನ್ನು ಒಂದು ಸಾರಿ ಮನ್ನಾ ಮಾಡುವ ಜೆಡಿಎಸ್ ಪಕ್ಷದ ಯೋಜನೆಯನ್ನು ಬೆಂಬಲಿಸಿ ತಮ್ಮನ್ನು ಗೆಲ್ಲಿಸಬೇಕು ಎಂದು ಅವರು ಕೋರಿದರು.

ಈ ತಿಂಗಳು 30 ಜಿಲ್ಲೆಗಳ ಪ್ರವಾಸ ಪೂರ್ಣಗೊಳಿಸಿದ ನಂತರ ಉತ್ತರ ಕರ್ನಾಟಕದ ಎಲ್ಲ ಹೋಬಳಿ, ತಾಲ್ಲೂಕು ಮಟ್ಟದಲ್ಲಿ ಪಕ್ಷದ ಸಂಘಟನೆಗೆ ಶ್ರಮಿಸುವುದಾಗಿ ತಿಳಿಸಿದ ಅವರು, ರೈತರ ಸಂಕಷ್ಟಗಳನ್ನು ದೂರಮಾಡಿ ರಾಜ್ಯದ ಜನತೆಗೆ ಉತ್ತಮ ಆಡಳಿತ ನೀಡಲು ಗೆಲ್ಲುವುದು ಅನಿವಾರ್ಯವಾಗಿದೆ ಎಂದರು.


ಜೆಡಿಎಸ್ ಜಿಲ್ಲಾ ಅಧ್ಯಕ್ಷ ಬಸವರಾಜ ಮಟಗಾರ, ಅಶೋಕ ಪೂಜಾರಿ, ಎ.ಬಿ. ಪಾಟೀಲ, ಎನ್.ವಿ. ಪಾಟೀಲ, ಅರವಿಂದ ದಳವಾಯಿ, ಮುಸ್ತಫಾ ದಾವಲಭಾಯಿ ವೇದಿಕೆಯಲ್ಲಿದ್ದರು. ತಾಲೂಕು ಘಟಕದ ಅಧ್ಯಕ್ಷ ಶಿವಪ್ಪ ಹಂಪಿಹೊಳಿ ಸ್ವಾಗತಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT