ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ಸರ್ಕಾರದಲ್ಲಿ ಅಗತ್ಯ ವಸ್ತು ಬೆಲೆ ಗಗನಕ್ಕೆ

Last Updated 23 ಏಪ್ರಿಲ್ 2013, 8:21 IST
ಅಕ್ಷರ ಗಾತ್ರ

ಸಾಗರ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿರುವ ಕಾರಣ ಅಗತ್ಯ ವಸ್ತುಗಳ ಬೆಲೆ ಈಗಾಗಲೇ ಗಗನಕ್ಕೆ ಏರಿದ್ದು, ಕರ್ನಾಟಕದಲ್ಲಿ ಆ ಪಕ್ಷ ಮತ್ತೆ ಅಧಿಕಾರಕ್ಕೆ ಬಂದರೆ ಅವಶ್ಯ ವಸ್ತುಗಳ ಬೆಲೆ ಮತ್ತಷ್ಟು ದುಬಾರಿಯಾಗುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್‌ಸಿಂಗ್ ಆರೋಪಿಸಿದರು.

ಇಲ್ಲಿನ ಗಾಂಧಿ ಮೈದಾನದಲ್ಲಿ ಸೋಮವಾರ ನಡೆದ ಭಾರತೀಯ ಜನತಾ ಪಕ್ಷದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ದೇಶದಲ್ಲಿ ಯಾವ ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಆಡಳಿತವಿದೆಯೋ ಅಲ್ಲೆಲ್ಲ ರೈತರಿಗೆ ಅನುಕೂಲವಾಗುವ ಅನೇಕ ಯೋಜನೆಗಳು ಜಾರಿಗೆ ಬಂದಿವೆ. ಕರ್ನಾಟಕದಲ್ಲಿ ಐದು ವರ್ಷಗಳ ಆಡಳಿತದಲ್ಲಿ ಬಿಜೆಪಿ ಸರ್ಕಾರ ರೂಪಿಸಿದ ರೈತಪರ, ಜನಪರ ಯೋಜನೆಗಳು ಇತರ ರಾಜ್ಯಗಳಿಗೆ ಮಾದರಿಯಾಗುವಂತಿದೆ ಎಂದರು.

ಹಿಂದಿನ ಐದು ವರ್ಷಗಳಲ್ಲಿ ಕರ್ನಾಟಕದಲ್ಲಿ 15 ಸಾವಿರ ಮೆಗಾವಾಟ್ ವಿದ್ಯುತ್ ಉತ್ಪಾದನೆ ಆಗಿದೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದಲ್ಲಿ ವಿದ್ಯುತ್ ವಿಷಯದಲ್ಲಿ ಈ ರಾಜ್ಯ ಸಂಪೂರ್ಣ ಸ್ವಾವಲಂಬನೆ ಸಾಧಿಸಲಿದೆ ಎಂದು ಹೇಳಿದರು.
ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗ ಬಿ.ಎಸ್. ಯಡಿಯೂರಪ್ಪ ಅವರೇ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಆಡಳಿತ ನಡೆಸುತ್ತಾರೆ ಎಂಬ ನಿರೀಕ್ಷೆ ಇತ್ತು.

ಆದರೆ ಲೋಕಾಯುಕ್ತ ಅವರ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದಾಗ ಬಿಜೆಪಿಯ ಸಂಸ್ಕೃತಿ ಮತ್ತು ಪರಂಪರೆಯಂತೆ ಅವರಿಗೆ ರಾಜೀನಾಮೆ ನೀಡಲು ಸೂಚಿಸಲಾಯಿತು. ಆರೋಪ ಮುಕ್ತರಾಗಿ ಅವರು ಹೊರಬಂದ ನಂತರ ಪಕ್ಷ ಮತ್ತೆ ಅವರಿಗೆ ಅವಕಾಶ ನೀಡುತ್ತಿತ್ತು ಎಂದು ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT