ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ಸಿಗೆ ಕಾರ್ಯಕರ್ತರೇ ಆಸ್ತಿ

Last Updated 11 ಜನವರಿ 2012, 7:35 IST
ಅಕ್ಷರ ಗಾತ್ರ

ಭಟ್ಕಳ: ಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರೇ ದೊಡ್ಡ ಆಸ್ತಿ. ಕೇಂದ್ರದ ಯು.ಪಿ.ಎ ಸರ್ಕಾರ ಜಾರಿಗೆ ತಂದಿರುವ ಹಲವು ಜನಪರ ಯೋಜನೆಗಳ ಬಗ್ಗೆ ಜನರಿಗೆ ಮನವರಿಕೆ ಮಾಡಿ ಮುಂಬ ರುವ ಚುನಾವಣೆಯಲ್ಲಿ ರಾಜ್ಯದಲ್ಲಿ ಬಹುಮತದಿಂದ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಎ.ಐ.ಸಿ.ಸಿ.ಪ್ರಧಾನ ಕಾರ್ಯ ದರ್ಶಿ ಹಾಗೂ ಪಕ್ಷದ ರಾಜ್ಯ ಉಸ್ತು ವಾರಿ ಮಧುಸೂದನ ಮಿಸ್ತ್ರಿ ಹೇಳಿದರು.

ಮುರ್ಡೇಶ್ವರದ ಆರ್.ಎನ್.ಎಸ್. ಸಭಾ ಭವನದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಕಾಂಗ್ರೆಸ್ ಪಕ್ಷದ ಧುರೀಣರ ಮತ್ತು ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಯು.ಪಿ.ಎ ಸರ್ಕಾರ ಲೋಕಪಾಲ ಮಸೂದೆ ಜಾರಿಗೆ ತರಲು ಸಂಸತ್ತಿನಲ್ಲಿ ಚರ್ಚೆ ನಡೆಸುತ್ತಿದ್ದರೆ, ಸಂಸತ್ತಿನ ಹೊರಗೆ ಮಸೂದೆ ಬಗ್ಗೆ ಹೋರಾಟ ನಡೆಸಲಾಗುತ್ತಿದೆ. ಇದು ಎಷ್ಟರಮಟ್ಟಿಗೆ ಸರಿ? ಎಂದು ಪ್ರಶ್ನಿಸಿದ ಅವರು, ಕರ್ನಾಟಕ ರಾಜ್ಯದಲ್ಲಿ ಭ್ರಷ್ಟ ಬಿ.ಜೆ.ಪಿ ಸರ್ಕಾರ ಹಾಗೂ ಮಂತ್ರಿಗಳು ಇರು ವಾಗ ಕೇಂದ್ರದ ಬಿ.ಜೆ.ಪಿ ಮುಖಂಡರು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿರು ವುದು ಹಾಸ್ಯಾಸ್ಪದವಾಗಿದೆ. ಕಾಂಗ್ರೆಸ್ ಪಕ್ಷದಿಂದ ಮಾತ್ರ ಎಲ್ಲರಿಗೂ ಸಾಮಾ ಜಿಕ ನ್ಯಾಯ ದೊರಕಲು ಸಾಧ್ಯ ಎಂದು ಅವರು ಹೇಳಿದರು.

ಎ.ಐ.ಸಿ.ಸಿ.ಪ್ರಧಾನ ಕಾರ್ಯದರ್ಶಿ ಬಿ.ಕೆ.ಹರಿಪ್ರಸಾದ ಮಾತನಾಡಿ,  ಈ ಸರ್ಕಾರ ಆಡಳಿತಕ್ಕೆ ಬಂದಾಗಿನಿಂದ ಅಲ್ಪಸಂಖ್ಯಾತರ ಧಾರ್ಮಿಕ ನೆಲೆಗಳ ಮೇಲೆ ದಾಳಿಗಳು ಹೆಚ್ಚಿದೆ. ಧರ್ಮ ಮತ್ತು ಹಿಂದುತ್ವದ ಹೆಸರಿನಲ್ಲಿ ಆಡಳಿತ ನಡೆಸುತ್ತಿರುವ ಬಿ.ಜೆ.ಪಿ ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರಿಯಲು ಯಾವುದೇ ನೈತಿಕ ಹಕ್ಕಿಲ್ಲ ಎಂದು ಅವರು ಪ್ರತಿಪಾದಿಸಿದರು.

ಮಾಜಿ ಸಚಿವ ಹಾಗೂ ಆರ್‌ವಿ ದೇಶಪಾಂಡೆ ಮಾತನಾಡಿ, ರಾಜ್ಯದಲ್ಲಿ ರುವ ಬಿಜೆಪಿ ಸರ್ಕಾರದಂಥಹ ನೀಚ ಸರ್ಕಾರವನ್ನು ಜನರು ಹಿಂದೆಂದೂ ಕಂಡಿರಲಿಲ್ಲ. ಯಾವುದೇ ರೈತರ ಜನಪರ ಯೋಜನೆಗಳನ್ನು ಜಾರಿಗೆ ತರದ ಈ ಸರ್ಕಾರದ ಮಂತ್ರಿಗಳು ಕೇವಲ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ ಎಂದು ಆರೋಪಿಸಿದರು.

ಕೆ.ಪಿ.ಸಿ.ಸಿ.ಅಧ್ಯಕ್ಷ ಡಾ.ಜಿ.ಪರ ಮೇಶ್ವರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಜ್ಯ ಸರ್ಕಾರದ ವಿರುದ್ಧ ಜನಾಂದೋಲನ ರೂಪಿಸುವುದಾಗಿ ಹೇಳಿದರು.


 ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕಿ ಮೋಟಮ್ಮ, ಸದಸ್ಯ ಎಸ್. ಎಲ್.ಘೋಟ್ನೆಕರ್, ಶಾಸಕರಾದ ಜೆ.ಡಿ.ನಾಯ್ಕ, ಯು.ಟಿ.ಖಾದರ್, ಮಾಜಿ ಶಾಸಕರಾದ ಉಮೇಶ ಭಟ್, ಕೆ.ಹೆಚ್.ಗೌಡ, ಎಸ್.ವಿ. ನಾಯಕ್, ಪ್ರಶಾಂತ ದೇಶಪಾಂಡೆ, ನಿವೇದಿತ ಆಳ್ವ, ಸತೀಶ್ ಸೈಲ್, ಸಾಯಿ ಗಾಂವಕರ್ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಭೀಮಣ್ಣ ನಾಯ್ಕ ಸ್ವಾಗತಿಸಿ ಪ್ರಾಸ್ತಾ ವಿಕವಾಗಿ ಮಾತನಾಡಿದರು. ಷಣ್ಮುಖ ಗೌಡ ನಿರೂಪಿಸಿ ವಂದಿಸಿದರು. ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ ಸುಮಾರು ಮೂರು ಸಾವಿರಕ್ಕೂ ಹೆಚ್ಚು ಮುಖಂಡರು ಕಾರ್ಯಕರ್ತರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT