ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ ಬೆಂಬಲಿಸಿ ಕಣದಿಂದ ಹಿಂದಕ್ಕೆ

Last Updated 15 ಏಪ್ರಿಲ್ 2014, 19:30 IST
ಅಕ್ಷರ ಗಾತ್ರ

ಕಿಶನ್‌ಗಂಜ್‌ (ಪಿಟಿಐ): ಕಿಶನ್‌ಗಂಜ್‌ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯನ್ನು ಬೆಂಬಲಿಸಿ ಜೆಡಿಯು ಅಭ್ಯರ್ಥಿ ಕಣದಿಂದ ಹಿಂದೆ ಸರಿದಿದ್ದಾರೆ. ಇದು ಬಿಹಾರ ಮುಖ್ಯ­ಮಂತ್ರಿ ನಿತೀಶ್‌ ಕುಮಾರ್‌ ಅವರನ್ನು ಮುಜುಗರಕ್ಕೀಡು ಮಾಡಿದೆ.

‘ಅಲ್ಪಸಂಖ್ಯಾತರ ಮತ ಒಡೆದು ಹೋಗಬಾರದು ಎಂಬ ಕಾರಣಕ್ಕಾಗಿ ಕಾಂಗ್ರೆಸ್‌ ಅಭ್ಯರ್ಥಿಯನ್ನು ಬೆಂಬಲಿಸಿ ಚುನಾವಣಾ ಅಖಾಡದಿಂದ ಹಿಂದೆ ಸರಿ­ಯಲು ನಿರ್ಧರಿಸಿದ್ದೇನೆ’ ಎಂದು ಜೆಡಿಯು ಅಭ್ಯರ್ಥಿ ಅಕ್ತರುಲ್‌ ಇಮಾನ್‌ ತಿಳಿಸಿದ್ದಾರೆ. ಅಲ್ಪಸಂಖ್ಯಾತರ ಪ್ರಾಬಲ್ಯದ ಕಿಶನ್‌ಗಂಜ್‌ ಕ್ಷೇತ್ರದಿಂದ ಕಾಂಗ್ರೆಸ್‌ನ ಹಾಲಿ ಸಂಸದ ಮೌಲಾನಾ ಅಸ್ರಾರುಲ್‌ ಹಕ್‌ ಪುನರಾಯ್ಕೆ ಬಯಸಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT