ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ನಿಂದ ಭಯೋತ್ಪಾದನೆಗೆ ಕುಮ್ಮಕ್ಕು: ಶೋಭಾ

ಬ್ರಹ್ಮಾವರ ಬಿಜೆಪಿ ಉಡುಪಿ ಗ್ರಾಮಾಂತರ ಕಚೇರಿ ಉದ್ಘಾಟನೆ
Last Updated 20 ಮಾರ್ಚ್ 2014, 8:54 IST
ಅಕ್ಷರ ಗಾತ್ರ

ಬ್ರಹ್ಮಾವರ: ದೇಶದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ಆಗದೇ ಕೇವಲ ಭಯೋತ್ಪಾದನೆ, ನಕ್ಸಲ್‌ ಚಟುವಟಿಕೆಗಳು ಹೆಚ್ಚಾಗುತ್ತಾ ಇದೆ. ಇದಕ್ಕೆ ವಿದೇಶದಿಂದಲೂ ಕುಮ್ಮಕ್ಕು ಸಿಗುತ್ತಿದೆ ಎಂದು ಉಡುಪಿ– ಚಿಕ್ಕಮ ಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಹೇಳಿದರು.

ಬ್ರಹ್ಮಾವರದಲ್ಲಿ ಬುಧವಾರ ಅವರು ಬಿಜೆಪಿ ಉಡುಪಿ ಗ್ರಾಮಾಂತರ ಕಚೇರಿ ಯನ್ನು ಉದ್ಘಾಟಿಸಿ ಕಾರ್ಯಕರ್ತ ರನ್ನು ಉದ್ದೇಶಿಸಿ ಮಾತನಾ ಡಿದರು.

ನರೇಂದ್ರ ಮೋದಿಯವರನ್ನು ಗೆಲ್ಲಿಸುವ ಜವಾಬ್ದಾರಿ ಕಾರ್ಯಕರ್ತರ ಕೈಯ ಲ್ಲಿದೆ. ಮೋದಿಯವರ ಸರ್ಕಾರ ದಲ್ಲಿ ದಕ್ಷಿಣ ಭಾರತದಿಂದ ಸಂಸದೆಯಾಗಿ ಕೈ ಎತ್ತುವ ಅವಕಾಶ ಕೇವಲ ಕರ್ನಾಟಕದಿಂದ ಮಾತ್ರ ಸಾಧ್ಯ. ಕಾಂಗ್ರೆಸ್‌ ಸರ್ಕಾರ ಬಂದ ಮೇಲೆ ಅಭಿವೃದ್ಧಿಗೆ ಬೆಲೆ ಕೊಡದೇ, ಕೇವಲ ಕೋಮುಗಲಭೆ, ಅಡಿಕೆ ಬೆಳೆಗಾರರ ಸಮಸ್ಯೆ, ಕುಮ್ಕಿ ಭೂಮಿಯ ಸಮಸ್ಯೆ, ಮೀನುಗಾರರ ಸಮಸ್ಯೆ, ಕಾರ್ಮಿಕರ ಸಮಸ್ಯೆಗಳನ್ನು ಸೃಷ್ಟಿಸಿದೆ. ಈ ಎಲ್ಲಾ ಸಮಸ್ಯೆಗಳ ಪರಿಹಾರಕ್ಕೆ ಬಿಜೆಪಿಯನ್ನು ಗೆಲ್ಲಿಸಿ ಎಂದು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಮಾಜಿ ಶಾಸಕ ರಘುಪತಿ ಭಟ್‌ ಕ್ಷೇತ್ರದಲ್ಲಿ ಮಹಿಳಾ ಮತದಾರರ ಸಂಖ್ಯೆ ಹೆಚ್ಚಿರುವ ಕಾರಣ ಶೋಭಾ ಕರಂದ್ಲಾಜೆ ಅವರನ್ನು ಚುನಾವಣಾ ಕಣಕ್ಕೆ ಇಳಿಸಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಆದ ಅಭಿವೃದ್ಧಿ ಕೆಲಸಗಳನ್ನು ನೋಡಿ ಮತದಾರರು ಮತ ಚಲಾಯಿಸಿ ಬಿಜೆಪಿಯನ್ನು ಗೆಲ್ಲಿಸಿ ಎಂದ ಅವರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬ್ರಹ್ಮಾವರ ಮತ್ತು ಉಡುಪಿಯಲ್ಲಿ ಬೇಕಾದ ಫ್ಲೈ ಓವರ್‌ ಬೇಕು ಎಂದರೂ ಕೇಂದ್ರ ಸಚಿವರು ಮತ್ತು ಸಂಸದರು ಸೌಲಭ್ಯ ನೀಡಲಿಲ್ಲ. ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ಇದನ್ನು ಕಾರ್ಯ ಕರ್ತರು ಪ್ರತಿಯೊಬ್ಬ ಮತದಾರನಿಗೂ ತಿಳಿಸಿ ಮತಯಾಚನೆ ಮಾಡಿ ಎಂದು ಕರೆ ನೀಡಿದರು.

ಸಮಾರಂಭದಲ್ಲಿ ಗ್ರಾಮಾಂತರ ಬಿಜೆಪಿಯ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಕರ್ಜೆ, ಪ್ರಮುಖರಾದ ಉದಯ ಕುಮಾರ ಶೆಟ್ಟಿ, ಯಶಪಾಲ್‌ ಸುವರ್ಣ, ಶ್ಯಾಮಲಾ ಕುಂದರ್‌, ವಿಲಾಸ್ ನಾಯಕ್‌, ಬಿ.ಎನ್‌.ಶಂಕರ ಪೂಜಾರಿ, ನಿಶಾನ್‌ ರೈ, ಶೀಲಾ ಕೆ ಶೆಟ್ಟಿ, ಜಯಂತಿ ವಾಸುದೇವ ಪೂಜಾರಿ, ಹರಿಮಕ್ಕಿ ರತ್ನಾಕರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಉಡುಪಿ ವಿಧಾನ ಸಭಾ ಕ್ಷೇತ್ರದ ಕೆಲವು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT