ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಡಾ ಮನೆ, ಕಚೇರಿ ಶೋಧ

Last Updated 19 ಆಗಸ್ಟ್ 2012, 19:30 IST
ಅಕ್ಷರ ಗಾತ್ರ

ಗುಡಗಾಂವ್ (ಐಎಎನ್‌ಎಸ್): ಮಾಜಿ ಗಗನಸಖಿ ಗೀತಿಕಾ ಆತ್ಮಹತ್ಯೆ ಪ್ರಕರಣದ ಆರೋಪಿ, ಹರಿಯಾಣದ ಮಾಜಿ ಸಚಿವ ಗೋಪಾಲ್ ಗೋಯಲ್ ಕಾಂಡಾ ಅವರ ಮನೆ ಹಾಗೂ ಕಚೇರಿಯಲ್ಲಿ ಭಾನುವಾರ ಶೋಧ ನಡೆಸಿದ ದೆಹಲಿ ಪೊಲೀಸರು ಎಲೆಕ್ಟ್ರಾನಿಕ್ ವಸ್ತುಗಳು ಮತ್ತು ಕಡತಗಳನ್ನು ವಶಪಡಿಸಿಕೊಂಡಿದ್ದಾರೆ.

`ಕಾಂಡಾ ಸಮ್ಮುಖದಲ್ಲಿಯೇ ಎಂಡಿಎಲ್‌ಆರ್ ಸಮೂಹದ ಕಚೆರಿಯಲ್ಲಿ ಮೂರು ತಾಸುಗಳ ಕಾಲ ಶೋಧ ನಡೆಸಲಾಯಿತು~ ಎಂದು ಪೊಲೀಸ್ ತಂಡದ ಸದಸ್ಯರೊಬ್ಬರು ತಿಳಿಸಿದ್ದಾರೆ.

`ಕಂಪ್ಯೂಟರ್, ಸರ್ವರ್, ಹಾರ್ಡ್ ಡಿಸ್ಕ್‌ಗಳು ಹಾಗೂ ಮೂರು ಕಡತಗಳನ್ನು ವಶಕ್ಕೆ ಪಡೆಯಲಾಗಿದೆ. ಶೋಧ ನಡೆಸಿದಾಗ ಹಾಸಿಗೆ ಹೊದಿಕೆಯಲ್ಲಿ ಸುತ್ತಿಟ್ಟಿದ್ದ ಕೆಲವೊಂದು ವಸ್ತುಗಳು ಪತ್ತೆಯಾಗಿವೆ. ನಂತರದಲ್ಲಿ ಕಾಂಡಾ ಅವರನ್ನು ಅವರ ಮನೆಗೆ ಕರೆದುಕೊಂಡು ಹೋಗಿ ಅಲ್ಲಿ ಅರ್ಧ ಗಂಟೆ ಶೋಧ ನಡೆಸಿದೆವು. ಈ ಸಂದರ್ಭದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಅವರ ಸಂಬಂಧಿಕರು ಹಾಗೂ ಕುಟುಂಬದ ಸದಸ್ಯರು ಇದ್ದರು~ ಎಂದು ಅವರು ಹೇಳಿದ್ದಾರೆ. ಕಾಂಡಾ ಅವರನ್ನು ಶನಿವಾರ ಬಂಧಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT