ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಡಾಗೆ ಮಧ್ಯಂತರ ಜಾಮೀನು

Last Updated 5 ಸೆಪ್ಟೆಂಬರ್ 2013, 9:57 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಗಗನಸಖಿ ಗೀತಿಕಾ ಶರ್ಮಾ ಅವರ ಆತ್ಮಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಹರಿಯಾಣದ ಮಾಜಿ ಸಚಿವ ಗೋಪಾಲ್ ಕಾಂಡಾಗೆ ದೆಹಲಿ ಹೈಕೋರ್ಟ್ ಗುರುವಾರ ಮಧ್ಯಂತರ ಜಾಮೀನು ನೀಡಿದೆ.

ಹರಿಯಾಣ ವಿಧಾನಸಭೆ ಅಧಿವೇಶನದ ಹಿನ್ನೆಲೆಯಲ್ಲಿ ಆಕ್ಟೋಬರ್ 4ರವರೆಗೆ ಕಾಂಡಾಗೆ ಮಧ್ಯಂತರ ಜಾಮೀನು ನೀಡಲಾಗಿದೆ.
ಕಳೆದ 13 ತಿಂಗಳಿನಿಂದ ಕಾಂಡ ಜೈಲಿನಲ್ಲಿದ್ದಾರೆ. ಕಾಂಡಾ ಅವರ ವಿಮಾನಯಾನ ಸಂಸ್ಥೆಯಲ್ಲಿ ಗೀತಿಕಾ ಶರ್ಮಾ ಗಗನಸಖಿಯಾಗಿ ಕೆಲಸ ಮಾಡುತ್ತಿದ್ದರು. 

ನನ್ನ ಸಾವಿಗೆ ಕಾಂಡಾ ಅವರೇ ಕಾರಣ ಎಂದು ಪತ್ರ ಬರೆದು ದೆಹಲಿಯ ವಸತಿ ಸಂಕೀರ್ಣವೊಂದರಲ್ಲಿ ಗೀತಿಕಾ ಶರ್ಮಾ ಆತ್ಮಹತ್ಯೆ ಮಾಡಿಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT