ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಟಾಚಾರಕ್ಕೆ ಪ್ರತಿಭಾ ಕಾರಂಜಿ: ಆಕ್ರೋಶ

Last Updated 11 ಡಿಸೆಂಬರ್ 2013, 9:01 IST
ಅಕ್ಷರ ಗಾತ್ರ

ಚಿಂತಾಮಣಿ: ಅಧಿಕಾರಿಗಳ ಬೇಜವಾಬ್ದಾರಿಯಿಂದ ಪೂರ್ವ ಸಿದ್ದತೆ ಇಲ್ಲದೆ ಕಾಟಾಚಾರಕ್ಕೆ ಪ್ರತಿಭಾ ಕಾರಂಜಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಉಪಾಧ್ಯಕ್ಷ ಆರ್‌,ವೆಂಕಟರಾಮರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಡೆಲಿಜಿಯನ್ಸ್‌ ಪ್ರೌಢಶಾಲೆಯಲ್ಲಿ ಸೋಮವಾರ ನಡೆದ ಕ್ಲಸ್ಟರ್‌ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಅಧಿಕಾರಿಗಳ ಕಾರ್ಯವೈಖರಿ ಬೇಸರ ಮೂಡಿಸುತ್ತದೆ ಎಂದರು. ಪ್ರತಿಭಾ ಕಾರಂಜಿ ಸ್ಪರ್ಧೆಗಳ ತೀರ್ಪುಗಾರರನ್ನಾಗಿ ಪ್ರೌಢಶಾಲಾ ಶಿಕ್ಷಕರು ಅಥವಾ ಕಾಲೇಜು ಉಪನ್ಯಾಸಕರನ್ನು ನೇಮಿಸಬೇಕು. ತೀರ್ಪುಗಾರರು ಪಾರದರ್ಶಕವಾಗಿ ಮಕ್ಕಳ ಪ್ರತಿಭೆ ಗುರುತಿಸಬೇಕು ಎಂದು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಮಂಜುನಾಥ್‌ ಅಭಿಪ್ರಾಯಪಟ್ಟರು.

ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜನಾರ್ದನರೆಡ್ಡಿ ಮಾತನಾಡಿದರು. ಶಿಕ್ಷಣ ಸಂಯೋಜಕ ಕೃಷ್ಣಮೂರ್ತಿ, ಮುಖ್ಯ ಶಿಕ್ಷಕ ಸುಬ್ಬಾರೆಡ್ಡಿ ಉಪಸ್ಥಿತರಿದ್ದರು. ನಗರ ವ್ಯಾಪ್ತಿಯ ಎಲ್ಲ ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಮಕ್ಕಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT