ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಡಾ ನಿರ್ದೇಶನಾಲಯ ಸ್ಥಾಪನೆ

Last Updated 5 ಜುಲೈ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ (ಕಾಡಾ) ವ್ಯಾಪ್ತಿಯಲ್ಲಿ ಕಾಲುವೆ, ಉಪ ಕಾಲುವೆಗಳ ನಿರ್ಮಾಣಕ್ಕಾಗಿ ಈ ವರ್ಷ 620 ಕೋಟಿ ರೂಪಾಯಿ ವೆಚ್ಚ ಮಾಡಲಾಗುತ್ತದೆ. ಇದನ್ನು ಸಮರ್ಪಕವಾಗಿ ಬಳಸಿಕೊಳ್ಳುವ ದೃಷ್ಟಿಯಿಂದ ಪ್ರತ್ಯೇಕವಾದ `ಕಾಡಾ ನಿರ್ದೇಶನಾಲಯ~ ಸ್ಥಾಪಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕಳೆದ ವರ್ಷ ಕಾಡಾ ಅಚ್ಚುಕಟ್ಟು ಪ್ರದೇಶಗಳಲ್ಲಿ ಕಾಲುವೆ, ಉಪ ಕಾಲುವೆಗಳ ನಿರ್ಮಾಣಕ್ಕೆ ರೂ 665 ಕೋಟಿ ವೆಚ್ಚ ಮಾಡಲಾಗಿತ್ತು. ಈ ವರ್ಷವೂ ಆ ಯೋಜನೆಯನ್ನು ಮುಂದುವರಿಸಲಾಗಿದೆ. ಕಾಲುವೆಗಳ ನಿರ್ಮಾಣ ಕಾಮಗಾರಿಯನ್ನು ತ್ವರಿತವಾಗಿ ಮತ್ತು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಕಾಡಾ ನಿರ್ದೇಶನಾಲಯ ಸ್ಥಾಪಿಸಲು ಸರ್ಕಾರ ತೀರ್ಮಾನಿಸಿದೆ ಎಂದು ಗುರುವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT