ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾನೂನಿನ ಅರಿವು ಮೂಡಿಸಲು ನ್ಯಾಯಾಧೀಶರ ಕರೆ

Last Updated 4 ಜನವರಿ 2011, 9:20 IST
ಅಕ್ಷರ ಗಾತ್ರ

ಮಡಿಕೇರಿ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಕೀಲರು ಹಾಗೂ ನ್ಯಾಯಾಧೀಶರ ಜವಾಬ್ದಾರಿ ಹೆಚ್ಚಿದ್ದು, ಸಮಾಜದಲ್ಲಿನ ಕಟ್ಟಕಡೆಯ ಜನರಿಗೂ ಕಾನೂನು ಅರಿವು ಮೂಡಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಸಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಅಶೋಕ್ ಜಿ. ನಿಜಗಣ್ಣವರ್ ಕರೆ ನೀಡಿದ್ದಾರೆ.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ವಕೀಲರಿಗಾಗಿ ಪ್ರಾಧಿಕಾರದ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಅರೆಕಾಲಿಕ ಕಾನೂನು ಸ್ವಯಂಸೇವಕರ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ‘ವಕೀಲ ವೃತ್ತಿಯು ಸಮಾಜದಲ್ಲಿ ನೊಂದವರು ಹಾಗೂ ಮುಖ್ಯವಾಹಿನಿಯಿಂದ ದೂರ ಉಳಿದಿರುವವರಿಗೆ ನ್ಯಾಯ ಒದಗಿಸುವುದಾಗಿದೆ. ಆ ಬದ್ಧತೆಯನ್ನು ಅರಿತು ಕೆಲಸ ಮಾಡಬೇಕು. ಸಮಾಜದ ಎಲ್ಲಾ ವರ್ಗದ ಜನರಿಗೆ ಕಾನೂನಿನ ಅರಿವು ಮೂಡಿಸಬೇಕು’ ಎಂದು ಸಲಹೆ ಮಾಡಿದರು.

‘ಸಮಾಜದಲ್ಲಿ ಪ್ರತಿಯೊಬ್ಬರೂ ಕಾನೂನಿನ ತಿಳುವಳಿಕೆ ಹೊಂದಿದಾಗ ಉತ್ತಮ ಬದುಕು ನಡೆಸಲು ಸಾಧ್ಯ. ಈ ನಿಟ್ಟಿನಲ್ಲಿ ಸೇವಾ ಪ್ರಾಧಿಕಾರ ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಮೂಡಿಸುವ ಉದ್ದೇಶದಿಂದ ಹಲವು ಕಾರ್ಯಾಗಾರಗಳನ್ನು ಹಮ್ಮಿಕೊಂಡಿದೆ. ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಳ್ಳಬೇಕು’ ಎಂದು ಮನವಿ ಮಾಡಿದರು.

ಕಾರ್ಯಾಗಾರದ ಅಧ್ಯಕ್ಷತೆ ವಹಿಸಿದ್ದ ವಕೀಲರ ಸಂಘದ ಅಧ್ಯಕ್ಷ ಸಿ.ಎಂ. ಮೇದಪ್ಪ, ಶೀಘ್ರ ವಿಲೇವಾರಿ ನ್ಯಾಯಾಲಯದ ಅಧ್ಯಕ್ಷಾಧಿಕಾರಿ ಕೆ.ಬಿ. ಅಸೋದೆ ಮಾತನಾಡಿ, ಕಾನೂನಿನ ಅರಿವು ಪಡೆದಲ್ಲಿ ಸಮಾಜದಲ್ಲಿ ಪ್ರತಿಯೊಬ್ಬರೂ ಉತ್ತಮ ನಾಗರಿಕರಾಗಿ ಬದುಕು ಸವೆಸಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಹೇಮಾವತಿ ಉಪಸ್ಥಿತರಿದ್ದರು. ವಕೀಲರಾದ ಎಂ.ಎ. ನಿರಂಜನ್, ಪಿ.ಯು. ಪ್ರೀತಂ, ಕೆ.ಎಂ. ಮೀನಾಕುಮಾರಿ, ಅರೆಕಾಲಿಕ ಕಾನೂನು ಸ್ವಯಂಸೇವಕರ ತರಬೇತಿ ಕಾರ್ಯಾಗಾರದ ಉಪನ್ಯಾಸಕರು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT