ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಮಗಾರಿ ಅಪೂರ್ಣ: ಬಿಲ್ ಮಾತ್ರ ಪೂರ್ಣ

Last Updated 27 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ದೇವನಹಳ್ಳಿ: ತಾಲ್ಲೂಕಿನ ವಿಶ್ವನಾಥಪುರ ಪದವಿಪೂರ್ವ ಕಾಲೇಜಿನಿಂದ ವಾಜರಹಳ್ಳಿ, ಶಾನಪ್ಪನಹಳ್ಳಿ ಮತ್ತು ಹೊಸೂರು ಗ್ರಾಮದ ಮೂಲಕ ಕೊಯಿರಾ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ದೊಡ್ಡಬಳ್ಳಾಪುರ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ದೋಶಪೂರಿತವಾಗಿದ್ದರೂ ಸಹ ಗುತ್ತಿಗೆದಾರರಿಗೆ ಪೂರ್ಣ ಬಿಲ್ ಪಾವತಿಸಲಾಗಿದೆ ಎಂದು ಇಲ್ಲಿನ ಗ್ರಾಮಸ್ಥರು ದೂರಿದ್ದಾರೆ.

ಈ ರಸ್ತೆಯಲ್ಲಿ ಕೂಲಿ ಕೆಲಸಕ್ಕೆ ತೆರಳುವ ಸಾಕಷ್ಟ ಮಂದಿ ಹಾಗೂ ಶಾಲಾ ವಿದ್ಯಾರ್ಥಿಗಳು ಸಂದಚರಿಸುತ್ತಿದ್ದಾರೆ. ಯಾವುದೇ ಭಾರಿ ವಾಹನಗಳು ಸಂಚರಿಸದಿದ್ದರು ಸಹ ಡಾಂಬರೀಕರಣಗೊಂಡ ಕೆಲವೇ ತಿಂಗಳಲ್ಲಿ ಅದೋ ಗತಿ ತಲುಪಿರುವುದರ ಬಗ್ಗೆ ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ. ನಬಾರ್ಡ್ ಯೋಜನೆಯಡಿ ಈ ರಸ್ತೆಯ ಅಭಿವೃದ್ಧಿಗಾಗಿ 37.43 ಲಕ್ಷರೂ ವೆಚ್ಚ ಮಾಡಲಾಗಿದೆ. ಅಗತ್ಯಕ್ಕಿಂತ ಹೆಚ್ಚಿನ ಹಣದಲ್ಲಿ ರಸ್ತೆ ನಿರ್ಮಾಣ ಮಾಡಲಾಗಿದ್ದರೂ ಸಾರ್ವಜನಿಕರು ಸುಗಮವಾಗಿ ಸಂಚರಿಸದ ಸ್ಥಿತಿ ತಲುಪಿದೆ.

ಮಳೆ ಬಂದರೆ ಈ ರಸ್ತೆಯಲ್ಲಿ ಪಾದಚಾರಿಗಳು ನಡೆದು ಸಾಗದಷ್ಟು ಕಷ್ಟವಾಗಿದೆ. ಸರ್ಕಾರ ವಿದ್ಯಾರ್ಥಿಗಳಿಗಾಗಿ ಉಚಿತ ಸೈಕಲ್ ನೀಡಿದೆ. ಈ ರಸ್ತೆಯಲ್ಲಿ ಸೈಕಲ್ ಹೊಡೆಯುವ ಮಕ್ಕಳು ಅಪಾಯದಲ್ಲಿ ಸಿಲುಕುವ ಸಾಧ್ಯತೆಗಳಿವೆ. ತಾಲ್ಲೂಕು ಆಡಳಿತಕ್ಕೆ ಈ ಬಗ್ಗೆ ಮಾಹಿತಿ ಇದ್ದರೂ ಮೌನ ವಹಿಸಿರುವುದು ಗ್ರಾಮಸ್ಥರ ಆಕ್ರೋಶ ಮತ್ತಷ್ಟು ಹೆಚ್ಚಾಗಲು ಕಾರಣವಾಗಿದೆ.

`ಕೂಡಲೇ ಜನಪ್ರತಿನಿಧಿಗಳು ಸಂಬಂಧಪಟ್ಟ ಇಲಾಖೆ ತುರ್ತುಕ್ರಮಕೈಗೊಳ್ಳಬೇಕು ಇಲ್ಲವಾದರೆ ಪ್ರತಿಭಟನೆ ನಡೆಸುತ್ತೇವೆ~ ಎಂದು ಬ್ಯಾಡರಹಳ್ಳಿ ಪಿ.ಚಂದ್ರಪ್ಪ, ಹೊಸೂರು ಗ್ರಾಮ ವೇಣುಗೋಪಾಲ್, ಮುನಿಶಾಮೇಗೌಡ ಒತ್ತಾಯಿಸಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT