ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಮಗಾರಿ ತ್ವರಿತಗೊಳಿಸಲು ಸಚಿವರ ಸೂಚನೆ

ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳ ಸಭೆ
Last Updated 10 ಡಿಸೆಂಬರ್ 2013, 5:35 IST
ಅಕ್ಷರ ಗಾತ್ರ

ಹೊಸಪೇಟೆ: ‘ಪ್ರವಾಸೋದ್ಯಮ ಇಲಾಖೆ ವತಿಯಿಂದ ಹಂಪಿ ವ್ಯಾಪ್ತಿಯಲ್ಲಿ ಆರಂಭವಾಗಿರುವ ₨ 65 ಕೋಟಿ ವೆಚ್ಚದ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು’ ಎಂದು ಪ್ರವಾಸೋದ್ಯಮ ಖಾತೆ ಸಚಿವ ಆರ್‌.ವಿ.ದೇಶಪಾಂಡೆ ಸೂಚಿಸಿದರು.

ನಗರದ ಅಮರಾವತಿ ಪ್ರವಾಸಿ ಮಂದಿರದಲ್ಲಿ ಸೋಮವಾರ ನಡೆದ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅರವಿಂದ ಜಾಧವ್‌ ಅವರು ಹಂಪಿ ವ್ಯಾಪ್ತಿಯಲ್ಲಿ ಕೈಗೊಂಡ ಕಾಮಗಾರಿಗಳ ಕುರಿತು ಮಾಹಿತಿ ನೀಡಿದರು. ‘ಹಂಪಿ ವಿಶ್ವ ಪಾರಂಪರಿಕ ಪ್ರದೇಶ ನಿರ್ವಹಣಾ ಪ್ರಾಧಿಕಾರದ ವತಿಯಿಂದ ಹಂಪಿ ವ್ಯಾಪ್ತಿಯಲ್ಲಿ ₨ 65 ಕೋಟಿ ವೆಚ್ಚದಲ್ಲಿ ಒಟ್ಟು 52 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿತ್ತು.

ಇದರಲ್ಲಿ ಕೇವಲ ₨ 22 ಕೋಟಿ ವೆಚ್ಚದಲ್ಲಿ 22 ಕಾಮಗಾರಿಗಳು ಪೂರ್ಣಗೊಂಡಿವೆ. 12 ಕಾಮಗಾರಿಗಳು ಪ್ರಗತಿ­ಯಲ್ಲಿವೆ. ಇನ್ನೂ 18 ಕಾಮಗಾರಿಗಳು ಆರಂಭವಾಗ­ಬೇಕಿದೆ’ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ದೇಶಪಾಂಡೆ, ‘ನೆನಗುದಿಗೆ ಬಿದ್ದಿರುವ ಕಾಮಗಾರಿ­ಗಳನ್ನು ಶೀಘ್ರದಲ್ಲಿಯೇ ಆರಂಭಿಸಬೇಕು. ಕಾಮಗಾ­ರಿಗಳಲ್ಲಿ ಪಾರದರ್ಶಕತೆ ಅಳವಡಿಸಿಕೊಂಡು ಪೂರ್ಣ­ಗೊ­ಳಿಸ­ಬೇಕು’ ಎಂದು ಸೂಚನೆ ನೀಡಿದರು.

‘ಹಂಪಿ ವಿಶ್ವಪಾರಂಪರಿಕ ತಾಣವಾಗಿರುವ ಹಿನ್ನೆಲೆಯಲ್ಲಿ ದೇಶ ವಿದೇಶಗಳಿಂದ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಈ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ಮೂಲ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಕಾಮಗಾರಿಗಳನ್ನು ಕೈಗೊಳ್ಳಬೇಕು’ ಎಂದು ಸೂಚಿಸಿದರು.

ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವೆ ಉಮಾಶ್ರೀ, ಜಿ.ಪಂ. ಅಧ್ಯೆಕ್ಷೆ ಶೋಭಾ ಬೆಂಡಿಗೇರಿ, ಜಿಲ್ಲಾಧಿಕಾರಿ ಅಮ್ಲಾನ್‌ ಆದಿತ್ಯ ಬಿಸ್ವಾಸ್‌ ಹಾಗೂ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT