ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಮೆಡ್-ಕೆ: ಕೌನ್ಸೆಲಿಂಗ್ ಆರಂಭ

Last Updated 5 ಜುಲೈ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: ಕಾಮೆಡ್ - ಕೆ ಕೋಟಾದ ಎಂಜಿನಿಯರಿಂಗ್ ಸೀಟುಗಳ ಪ್ರವೇಶಕ್ಕೆ ಶುಕ್ರವಾರ ಕೌನ್ಸೆಲಿಂಗ್ ಆರಂಭವಾಗಿದ್ದು, ಮೊದಲ ದಿನ 1,052 ಮಂದಿ ಸೀಟು ಆಯ್ಕೆ ಮಾಡಿಕೊಂಡಿದ್ದಾರೆ.

ಶುಕ್ರವಾರದಿಂದ ಆರಂಭವಾಗಿರುವ ಮೊದಲ ಸುತ್ತಿನ ಕೌನ್ಸೆಲಿಂಗ್ ಈ ತಿಂಗಳ 16ರವರೆಗೂ ನಡೆಯಲಿದೆ. ಮೊದಲ ಸುತ್ತಿನ ಕೌನ್ಸೆಲಿಂಗ್ ಪೂರ್ಣಗೊಂಡ ನಂತರ 16,878 ಸೀಟುಗಳು ಖಾಲಿ ಇವೆ ಎಂದು ಕಾಮೆಡ್ - ಕೆ ಮೂಲಗಳು ತಿಳಿಸಿವೆ.

ಮೊದಲ ದಿನ ಒಂದರಿಂದ 2550 ರ‍್ಯಾಂಕ್‌ವರೆಗಿನ ಅಭ್ಯರ್ಥಿಗಳಿಗೆ ಕೌನ್ಸೆಲಿಂಗ್ ನಡೆಯಿತು. ಶನಿವಾರ 2551ರಿಂದ 5100 ರ‍್ಯಾಂಕ್‌ವರೆಗಿನ ಅಭ್ಯರ್ಥಿಗಳಿಗೆ ಕೌನ್ಸೆಲಿಂಗ್ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT