ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ಖಾನೆ ಮಾಲೀಕರ ವಿರುದ್ಧ ಪ್ರಕರಣ ದಾಖಲು

Last Updated 1 ಅಕ್ಟೋಬರ್ 2011, 20:00 IST
ಅಕ್ಷರ ಗಾತ್ರ

ಬೆಂಗಳೂರು: ಪೀಣ್ಯ ಕೈಗಾರಿಕಾ ಪ್ರದೇಶದ ಎಲಾಸ್ಟ್ರೆಕ್ಸ್ ಪಾಲಿಮರ್ಸ್‌ ಪ್ರೈವೇಟ್ ಲಿಮಿಟೆಡ್ ಪಾದರಕ್ಷೆ ತಯಾರಿಕಾ ಕಾರ್ಖಾನೆಯಲ್ಲಿ ಅಗ್ನಿ ಅನಾಹುತ ಸಂಭವಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಖಾನೆ ಮಾಲೀಕರು ಮತ್ತು ಆಡಳಿತ ಮಂಡಳಿ ಸದಸ್ಯರ ವಿರುದ್ಧ ರಾಜಗೋಪಾಲನಗರ ಪೊಲೀಸರು ನಿರ್ಲಕ್ಷ್ಯ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಘಟನೆ ಸಂಬಂಧ ಬೆಂಗಳೂರು ನಗರ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ದೇವರಾಜು ಅವರು ದೂರು ಕೊಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಕಾರ್ಖಾನೆಯಲ್ಲಿ ಅಗ್ನಿ ಅನಾಹುತಗಳನ್ನು ತಡೆಯಲು ಸೂಕ್ತ ಸುರಕ್ಷತಾ ಕ್ರಮಗಳನ್ನು ಕೈಗೊಂಡಿರಲಿಲ್ಲ.

ಕಾರ್ಖಾನೆಯ ಮಾಲೀಕರು ಮತ್ತು ಆಡಳಿತ ಮಂಡಳಿ ಸದಸ್ಯರ ನಿರ್ಲಕ್ಷ್ಯದಿಂದಲೇ ಈ ದುರ್ಘಟನೆ ನಡೆದಿದೆ ಎಂದು ದೇವರಾಜು ಅವರು ದೂರಿನಲ್ಲಿ ತಿಳಿಸಿದ್ದಾರೆ. ಅವರ ದೂರಿನ ಅನ್ವಯ ಭಾರತೀಯ ದಂಡ ಸಂಹಿತೆ ಸೆಕ್ಷನ್ 285ರ ಪ್ರಕಾರ ನಿರ್ಲಕ್ಷ್ಯ ಪ್ರಕರಣ ದಾಖಲಿಸಿಕೊಳ್ಳ ಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

26 ಕೋಟಿ ನಷ್ಟ: `ಅಗ್ನಿ ಅನಾಹುತದಲ್ಲಿ ಸುಮಾರು ರೂ. 26 ಕೋಟಿ ನಷ್ಟ ಸಂಭವಿಸಿದೆ~ ಎಂದು ಎಲಾಸ್ಟ್ರೆಕ್ಸ್ ಪಾಲಿಮರ್ಸ್‌ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆ ಆಡಳಿತ ಮಂಡಳಿ ಸದಸ್ಯರು ದೂರು ಕೊಟ್ಟಿದ್ದಾರೆ. ಎರಡೂ ದೂರುಗಳನ್ನು ದಾಖಲಿಸಿ ಕೊಂಡು ತನಿಖೆ ಮುಂದುವರೆಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT