ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಲಚಕ್ರ ಕಳಸ ಸ್ಥಾಪನೆ ಸಮಾರೋಪ

Last Updated 16 ಡಿಸೆಂಬರ್ 2012, 19:59 IST
ಅಕ್ಷರ ಗಾತ್ರ

ಬೆಂಗಳೂರು: ನೊಣವಿನಕೆರೆ ಶಿವಯೋಗೀಶ್ವರ ವಿಶ್ವ ಕಲ್ಯಾಣ ಟ್ರಸ್ಟ್ ಆಶ್ರಯದಲ್ಲಿ ಶ್ರಿ ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಸ್ವಾಮೀಜಿ ನೇತೃತ್ವದಲ್ಲಿ ವಿಶ್ವದ ಕಲ್ಯಾಣಕ್ಕಾಗಿ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ವಿಶ್ವ ಭೂಮಂಡಲ ಕಾಲಚಕ್ರ ಕಳಸ ಸ್ಥಾಪನಾ ಮಹೋತ್ಸವವು ವಿಧಿವತ್ತಾಗಿ ನೆರವೇರಿತು.

ಇದೇ ಪ್ರಥಮ ಬಾರಿಗೆ ಇಂತಹ ಕಳಸ ಸ್ಥಾಪನಾ ಕಾರ್ಯ ನಡೆದಿದ್ದು, ಮಹಾಪ್ರಳಯದ ವ್ಯಾಪಕ ಪ್ರಚಾರದ ಹಿನ್ನಲೆಯಲ್ಲಿ ಇಡೀ ವಿಶ್ವದಲ್ಲಿ ಸುಖ-ಶಾಂತಿ ನೆಲಸಲಿ ಎಂಬ ಧ್ಯೇಯದೊಂದಿಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. 16 ದಿನಗಳ ಕಾಲ ಧಾರ್ಮಿಕ ವಿಧಿಗಳು ನಡೆದವು. ಸಾವಿರಾರು ಜನ ಪಾಲ್ಗೊಂಡಿದ್ದರು.

ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ದಂಪತಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಮತ್ತು ಡಿ.ವಿ. ಸದಾನಂದಗೌಡ, ಶಾಸಕರಾದ ಜಮೀರ್ ಅಹಮದ್, ಡಿ.ಕೆ. ಶಿವಕುಮಾರ್, ಸಂಸದ ಎನ್. ಚೆಲುವ ನಾರಾಯಣಸ್ವಾಮಿ ಭಾಗವಹಿಸಿದ್ದರು. ವಿವಿಧ ಮಠಗಳ ಸ್ವಾಮೀಜಿಗಳು ಸಹ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT