ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಲುಬಾಯಿ ರೋಗ: ಪಲ್ಸ್ ಪೋಲಿಯೊ ಮಾದರಿ ಅಭಿಯಾನ

Last Updated 5 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಸುವರ್ಣ ಸೌಧ (ಬೆಳಗಾವಿ): ಜಾನುವಾರುಗಳನ್ನು ಕಾಡುತ್ತಿರುವ ಕಾಲು ಬಾಯಿ ರೋಗಕ್ಕೆ  ಪಲ್ಸ್ ಪೋಲಿಯೊ ಮಾದರಿಯಲ್ಲಿ ಅಭಿ­ಯಾನ ನಡೆಸಿ ಲಸಿಕೆ ಹಾಕಲಾಗು­ವುದು ಎಂದು ಪಶು ಸಂಗೋಪನಾ ಸಚಿವ ಟಿ.ಬಿ.ಜಯಚಂದ್ರ ವಿಧಾನ ಪರಿಷತ್ತಿಗೆ ತಿಳಿಸಿದರು.

ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ  ಕೇಳಿದ ಪ್ರಶ್ನೆಗೆ ಉತ್ತರಿಸಿ, ‘ಕಾಲು ಬಾಯಿ ರೋಗ ತಡೆಗೆ ಲಸಿಕೆಯೊಂದೇ ಮದ್ದು. ಮೂರು ವರ್ಷಗಳಲ್ಲಿ ಈ ಪ್ರಕ್ರಿಯೆ ಸರಿಯಾಗಿ ನಡೆಯದ ಕಾರಣ ರೋಗ ಹೆಚ್ಚು­ತ್ತಿದೆ. ಈಗ 5ನೇ ಸುತ್ತಿನ ಲಸಿಕೆ ಕಾರ್ಯಕ್ರಮ ನಡೆಯುತ್ತಿದೆ. ಲಸಿಕೆ ಹಾಕುವ ಕಾರ್ಯಕ್ಕೆ ಸಿಬ್ಬಂದಿ ಕೊರತೆ ಕಾಡುತ್ತಿದ್ದು ಬೇರೆ ಇಲಾಖೆಯಿಂದ ಸಿಬ್ಬಂದಿಯನ್ನು ಎರವಲು ಪಡೆಯಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT