ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಲುವೆ ಮೇಲೆ ಸಿಮೆಂಟ್ ಸ್ಲ್ಯಾಬ್

Last Updated 8 ಜುಲೈ 2013, 5:47 IST
ಅಕ್ಷರ ಗಾತ್ರ

ಮುಂಡಗೋಡ: ತಾಲ್ಲೂಕಿನ ಚಿಗಳ್ಳಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದ ನಡುವೆ ಹಾದು ಹೋಗಿರುವ ಕಾಲುವೆ ಮೇಲೆ ಗ್ರಾಮ ಪಂಚಾಯ್ತಿ ವತಿಯಿಂದ ಸಿಮೆಂಟ್ ಸ್ಲ್ಯಾಬ್ ಹಾಕಲಾಗಿದೆ. ಈ ಮೊದಲು ಇಲ್ಲಿ ತಿರುಗಾಡಲು ಮಕ್ಕಳಿಗೆ ತೊಂದರೆಯಾಗಿತ್ತು.

ಕಳೆದ ಮೂರು ವರ್ಷಗಳಿಂದ ಕಾಲುವೆ ಕಾಮಗಾರಿ ನಡೆದಿದ್ದು ಮೆಲ್ಭಾಗದಲ್ಲಿ ಸ್ಲ್ಯಾಬ್ ಹಾಕದೇ ಇರುವುದರಿಂದ ಮಕ್ಕಳು ಶೌಚಾಲಯಕ್ಕೆ ಹೋಗಲು ಹಲಗೆಯ ಮೇಲೆ ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಾ ಹೋಗಬೇಕಾಗಿತ್ತು. ಈ ಬಗ್ಗೆ `ಪ್ರಜಾವಾಣಿ'ಯಲ್ಲಿ ಶುಕ್ರವಾರ ವರದಿ ಪ್ರಕಟಗೊಳ್ಳುತ್ತಿದ್ದಂತೆ ಎಚ್ಚೆತ್ತುಕೊಂಡ ಗ್ರಾಮ ಪಂಚಾಯ್ತಿ ಅಧಿಕಾರಿಗಳು ತಾತ್ಕಾಲಿವಾಗಿ ಸಿಮೆಂಟ್ ಸ್ಲ್ಯಾಬ್ ಹಾಕಿದ್ದಾರೆ.

ಇದರಿಂದ ಶಿಕ್ಷಕರು ಹಲಗೆಗಳನ್ನು ಇಡುವ ದಿನನಿತ್ಯದ ಕೆಲಸದಿಂದ ಮುಕ್ತರಾಗಿದ್ದಾರೆ. ಆಮೆಗತಿಯಲ್ಲಿ ಸಾಗಿರುವ ಕಾಲುವೆ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT