ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಲೇಜು ಮಾನ್ಯತೆ ನವೀಕರಣ- ಸೂಚನೆ

Last Updated 4 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿನ ಅನುದಾನಿತ ಮತ್ತು ಅನುದಾನರಹಿತ ಖಾಸಗಿ ಪದವಿ ಪೂರ್ವ ಕಾಲೇಜುಗಳು ಮಾನ್ಯತೆಯನ್ನು ನವೀಕರಿಸಿಕೊಳ್ಳಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಸೂಚಿಸಿದೆ.

ಈ ಹಿಂದೆ 2006ರಲ್ಲಿ ಕಾಲೇಜುಗಳ ಮಾನ್ಯತೆಯನ್ನು 5 ವರ್ಷಗಳ ಅವಧಿಗೆ ನವೀಕರಿಸಲಾಗಿತ್ತು. 2010-11ಕ್ಕೆ ಆ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಈಗ ಮಾನ್ಯತೆಯನ್ನು ನವೀಕರಿಸಿಕೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಮಾನ್ಯತೆ ನವೀಕರಣದ ಅರ್ಜಿ ನಮೂನೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ವೆಬ್‌ಸೈಟ್‌ನಲ್ಲಿ ಲಭ್ಯವಿದೆ. ಕಾಲೇಜಿನವರು ಅದನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಇದೇ 16ರ ಒಳಗೆ ಜಿಲ್ಲಾ ಉಪ ನಿರ್ದೇಶಕರಿಗೆ ಸಲ್ಲಿಸುವಂತೆ ಆಯುಕ್ತರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT