ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾವೇರಿ: 16ರಂದು ಕಾನೂನು ತಜ್ಞರೊಂದಿಗೆ ಚರ್ಚೆ

Last Updated 9 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಬೆಂಗಳೂರು: ಕಾವೇರಿ ನದಿ ನೀರಿನ ಹಂಚಿಕೆಗೆ ಸಂಬಂಧಿಸಿದ ಪ್ರಕರಣ ಜನವರಿ 15ರಂದು ಸುಪ್ರೀಂ ಕೋರ್ಟ್ ಮುಂದೆ ವಿಚಾರಣೆಗೆ ಬರಲಿದೆ. ಈ ಹಿನ್ನೆಲೆಯಲ್ಲಿ ಇದೇ 16ರಂದು ನವ­ದೆಹಲಿಯಲ್ಲಿ ಹಿರಿಯ ವಕೀಲ ಎಫ್‌.­ಎಸ್‌. ನಾರಿಮನ್‌ ಅವರೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ತಿಳಿಸಿದರು.

‘ಜಲಸಂಪನ್ಮೂಲ ಸಚಿವ ಎಂ.ಬಿ.­ಪಾಟೀಲ ಹಾಗೂ ನಾನು ನಾರಿಮನ್‌ ಹಾಗೂ ವಕೀಲರ ತಂಡದೊಂದಿಗೆ ಪೂರ್ವಭಾವಿ­ಯಾಗಿ ಚರ್ಚಿಸುತ್ತೇವೆ’ ಎಂದು ಸುದ್ದಿಗಾರರಿಗೆ ತಿಳಿಸಿದರು.

ಕೃಷ್ಣಾ ನದಿ ನೀರಿ ಬಗ್ಗೆ ರಾಜ್ಯ ತೆಗೆದುಕೊಳ್ಳ­ಬೇಕಾದ ನಿಲು­ವಿನ ಬಗ್ಗೆಯೂ ಆದಷ್ಟು ಬೇಗ ನಾರಿಮನ್‌ ಅವರೊಂದಿಗೆ ಚರ್ಚಿಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಶಿವನಸಮುದ್ರ, ಮೇಕೆದಾಟು ಯೋಜನೆಯ ವಿಷಯ ಜನವರಿ 15ರಂದು ವಿಚಾರಣೆಗೆ ಬರುವ ನಿರೀಕ್ಷೆ ಇದೆ. ಮೇಕೆ­ದಾಟು ಬಳಿ 30ರಿಂದ 70 ಟಿಎಂಸಿ ಅಡಿ ನೀರು ಸಂಗ್ರಹಣಾ ಸಾಮರ್ಥ್ಯದ ಜಲಾಶಯ ನಿರ್ಮಿಸ­ಬಹು­ದಾಗಿದೆ. ಆದರೆ ರೈತರು ಅಧಿಕ ಪ್ರಮಾಣದಲ್ಲಿ ಭೂಮಿ ಕಳೆದುಕೊಳ್ಳುತ್ತಾರೆ ಎಂದರು.

ಗುರುವಾರ ಸಭೆ: ಕಲಬೆರಕೆ ಹಾಲು ಮಾರಾಟ ತಡೆಯಲು ಆಯಾ ರಾಜ್ಯ­ಗಳು ಕಾಯ್ದೆ ರೂಪಿಸಬೇಕು ಎಂದು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಸಭೆ ಕರೆಯಲಾಗಿದೆ. ಆರೋಗ್ಯ ಇಲಾಖೆಯ ಸಚಿವರು, ಅಧಿಕಾರಿಗಳು ಇದರಲ್ಲಿ ಭಾಗವಹಿಸಲಿದ್ದಾರೆ ಎಂದರು.

ಶೀಘ್ರ ನೇಮಕಾತಿ: 642 ಪಶುವೈದ್ಯರ ನೇಮಕ ಪ್ರಕ್ರಿಯೆ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ನೇಮಕಾತಿ ಆದೇಶ ನೀಡ­ಲಾಗುವುದು ಎಂದು ಪ್ರಶ್ನೆ­ಯೊಂದಕ್ಕೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT