ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾವೇರಿ ನೀರು ಪೂರೈಕೆಗೆ ಭರದ ಸಿದ್ಧತೆ

Last Updated 21 ಅಕ್ಟೋಬರ್ 2012, 18:30 IST
ಅಕ್ಷರ ಗಾತ್ರ

ಕೃಷ್ಣರಾಜಪುರ: `ಕ್ಷೇತ್ರದ ಜನರಿಗೆ ಕಾವೇರಿ ನೀರು ಪೂರೈಕೆಗೆ ಭರದ ಸಿದ್ಧತೆ ನಡೆಯುತ್ತಿದೆ. ಕಾವೇರಿ ನೀರು ಪೂರೈಕೆ ಯೋಜನೆಗೆ ಎ.ನಾರಾಯಣಪುರ ಗ್ರಾಮದಲ್ಲಿ ಸಾಂಕೇತಿಕವಾಗಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ನವೆಂಬರ್ ಒಂದರಂದು ಚಾಲನೆ ನೀಡುವರು~ ಎಂದು ಶಾಸಕ ಎನ್.ಎಸ್.ನಂದೀಶ ರೆಡ್ಡಿ ತಿಳಿಸಿದರು.

ನಗರಕ್ಕೆ ಸೇರ್ಪಡೆಯಾದ ಬಡಾವಣೆಗಳಿಗೆ ಕಾವೇರಿ ನೀರು ಪೂರೈಕೆ ಮಾಡುವ ವಿಚಾರಕ್ಕೆ ಸಂಬಂಧಿಸಿ ಪಟ್ಟಣದಲ್ಲಿ ಶನಿವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಅವರು ಮಾತನಾಡಿ, `ರಾಮಮೂರ್ತಿನಗರದಲ್ಲಿ ಏಳು ದಶಲಕ್ಷ ಲೀಟರ್ ಸಾಮರ್ಥ್ಯದ ಜಲ ಸಂಗ್ರಹಾಗಾರದ ಕಾಮಗಾರಿ ಪೂರ್ಣಗೊಂಡಿದೆ~ ಎಂದರು.

`ಕಾವೇರಿ ಜಲೋತ್ಸವ-2012 ಅಂಗವಾಗಿ ಇದೇ 24 ರಿಂದ 31ರವರೆಗೆ ಪ್ರತಿದಿನ ಸಂಜೆ ಕ್ಷೇತ್ರದ ಎಲ್ಲ ವಾರ್ಡುಗಳ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿದ್ದು ಕಾವೇರಿ ಮಾತೆಯ ರಥಯಾತ್ರೆಯನ್ನು ಆಯೋಜಿಸಲಾಗಿದೆ~ ಎಂದು ಅವರು ಮಾಹಿತಿ ನೀಡಿದರು.

`ಕ್ಷೇತ್ರದಲ್ಲಿ ಕುಡಿಯುವ ನೀರು ಸಂಪರ್ಕಕ್ಕೆ 70 ಸಾವಿರ ಅರ್ಜಿಗಳು ಬಂದಿದ್ದು ಅದರಲ್ಲಿ 50 ಸಾವಿರ ಅರ್ಜಿಗಳನ್ನು ಪುರಸ್ಕರಿಸಲಾಗಿದೆ. ಒಂದು ದಿನಕ್ಕೆ ಒಂದು ಸಾವಿರ ಮನೆಗಳಿಗೆ ಸಂಪರ್ಕ ನೀಡಲು ಕ್ರಮ ಕೈಗೊಳ್ಳಲಾಗಿದೆ. ಕೆ.ಆರ್. ಪುರ ಕ್ಷೇತ್ರಕ್ಕೆ 500 ಎಂಎಲ್‌ಡಿ ನೀರು ಲಭ್ಯ~ ಎಂದು ನಂದೀಶ್ ರೆಡ್ಡಿ ಮಾಹಿತಿ ನೀಡಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT