ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾವೇರಿ ಹರಿಯುವುದನ್ನು ನಿಲ್ಲಿಸಿ: ಪ್ರಧಾನಿಗೆ ಕೃಷ್ಣ ಮನವಿ

Last Updated 6 ಅಕ್ಟೋಬರ್ 2012, 8:05 IST
ಅಕ್ಷರ ಗಾತ್ರ

ಬೆಂಗಳೂರು (ಪಿಟಿಐ): ಕಾವೇರಿ ಜಲನಯನ ಪ್ರದೇಶದ ಜಿಲ್ಲೆಗಳಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಗಂಭೀರ ಸ್ವರೂಪವನ್ನು ಪಡೆಯುತಲಿದ್ದು, ತಮಿಳುನಾಡಿಗೆ ಹರಿಯುತ್ತಿರುವ ಕಾವೇರಿ ನದಿ ನೀರನ್ನು  ತಾತ್ಕಾಲಿಕವಾಗಿ ನಿಲ್ಲಿಸುವಲ್ಲಿನ ಸಾಧ್ಯತೆಗಳನ್ನು ಪರಿಶೀಲಿಸುವಂತೆ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಅವರು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರಲ್ಲಿ ಶನಿವಾರ ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾರೆ.

ಪ್ರಸ್ತುತ ಅಮೆರಿಕ ಪ್ರವಾಸದಲ್ಲಿರುವ ಎಸ್.ಎಂ. ಕೃಷ್ಣ ಅವರು ಈ ಬಗ್ಗೆ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅವರಿಗೆ ಪತ್ರ ಬರೆದಿದ್ದು, `ಕರ್ನಾಟಕದ ಕೆಲ ಜಲಾಶಯಗಳಿಂದ ತಮಿಳುನಾಡಿಗೆ ಹರಿಯುತ್ತಿರುವ ಕಾವೇರಿ ನದಿ ನೀರನ್ನು ತಾತ್ಕಾಲಿಕವಾಗಿ ನಿಲ್ಲಿಸುವಲ್ಲಿನ ಸಾಧ್ಯತೆಗಳನ್ನು ಪರಿಶೀಲಿಸುವಂತೆ ಹಾಗೂ ಈಗಾಗಲೇ ಕೇಂದ್ರ ತಂಡಗಳು ಎರಡು ರಾಜ್ಯಗಳಲ್ಲಿನ ವಸ್ತು ಸ್ಥಿತಿಯ ಅಧ್ಯಯನದಲ್ಲಿದ್ದು, ಅಧಿಕಾರಿಗಳು ನೀಡುವ ಮಧ್ಯಾಂತರ ವರದಿಯ ಆಧಾರದ ಮೇಲೆ ಮುಂದಿನ ಕ್ರಮಗಳ ಬಗ್ಗೆ ನಿರ್ಣಯಿಸಬಹುದು~ ಎಂದು ಕೃಷ್ಣ ಅವರು ಪ್ರಧಾನಿ ಅವರಿಗೆ ಪತ್ರದ ಮುಖಾಂತರ ವಿನಂತಿಸಿಕೊಂಡಿದ್ದಾರೆ. ಪತ್ರದ ಪ್ರತಿಯು ಇಲ್ಲಿ ಬಿಡುಗಡೆಯಾಗಿದೆ.

`ರಾಜ್ಯವು ಬರಗಾಲಕ್ಕೆ ತುತ್ತಾಗಿದ್ದು, ಮುಂಬರುವ ದಿನಗಳಲ್ಲಿ ರಾಜ್ಯದ ಜನತೆ ತೀವ್ರವಾಗಿ ನೀರಿನ ಕೊರತೆಯನ್ನು ಅನುಭವಿಸಲಿದ್ದಾರೆ. ಅದರಲ್ಲೂ ಕಾವೇರಿ ಕೊಳ್ಳದ ಜನರು ಹೆಚ್ಚು ತೊಂದರೆ ಒಳಗಾಗಲಿದ್ದಾರೆ. ಮುಂದಿನ ದಿನಗಳಲ್ಲಿ ನಡೆಯಬಹುದಾದ ಸಮಸ್ಯೆಗಳನ್ನು ತಪ್ಪಿಸುವುದಕ್ಕಾಗಿ ತಕ್ಷಣ ಈ ಬಗ್ಗೆ ಗಮನಹರಿಸಬೇಕು ಎಂದು  ಪ್ರಧಾನಿ ಅವರಲ್ಲಿ ಪ್ರಾಮಾಣಿಕವಾಗಿ ವಿನಂತಿಸಿಕೊಂಡಿದ್ದೇನೆ~ ಎಂದು ರಾಜ್ಯದಲ್ಲಿ ಬಿಡುಗಡೆಯಾದ ಪತ್ರದಲ್ಲಿ ಕೃಷ್ಣ ಅವರು ತಿಳಿಸಿದ್ದಾರೆ.


ಕೃಷ್ಣ ಅವರು ಕಾವೇರಿ ಜಲನಯನ ಪ್ರದೇಶದ ಕೇಂದ್ರ ಬಿಂದು ಮಂಡ್ಯ ಜಿಲ್ಲೆಗೆ ಸೇರಿದವರಾಗಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT