ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಶ್ಮೀರದಲ್ಲಿ ಗುಂಡಿನ ಚಕಮಕಿ: ಐವರು ಉಗ್ರರ ಹತ್ಯೆ

Last Updated 4 ಆಗಸ್ಟ್ 2018, 18:55 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು–ಕಾಶ್ಮೀರದ ಕಪ್ವಾರ ಜಿಲ್ಲೆಯಲ್ಲಿ ಶನಿವಾರ ಬೆಳಿಗ್ಗೆ ನಡೆದ ಗುಂಡಿನ ಚಕಮಕಿಯಲ್ಲಿ ಭದ್ರತಾ ಸಿಬ್ಬಂದಿ ಐವರು ಉಗ್ರರನ್ನು ಹೊಡೆದುರುಳಿಸಿದೆ. ಘಟನೆಯಲ್ಲಿ ಇಬ್ಬರು ಯೋಧರು ಮೃತಪಟ್ಟಿದ್ದಾರೆ.

ಕುಪ್ವಾರ ಜಿಲ್ಲೆಯ ಚೌಕಿಬಾಲ್‌ನಲ್ಲಿ ಗುಂಡಿನ ಕಾಳಗ ನಡೆದಿದೆ ಎಂದು ಸೇನಾ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಚೌಕಿಬಾಲ್‌ನ ಮರ್ಸೆರಿ ಗ್ರಾಮದ ಮನೆಯೊಂದರಲ್ಲಿ ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಲಭಿಸಿತು. ಇದನ್ನು ಆಧರಿಸಿ ಶುಕ್ರವಾರ ಸಂಜೆ ಭದ್ರತಾ ಪಡೆ ಕಾರ್ಯಾಚರಣೆಗೆ ಇಳಿಯಿತು. ಗುಂಡಿನ ಚಕಮಕಿಯಲ್ಲಿ ಐವರು ಉಗ್ರರನ್ನು ಕೊಲ್ಲಲಾಗಿದೆ. ಶನಿವಾರ ಮಧ್ಯಾಹ್ನವೂ ಗುಂಡಿನ ಚಕಮಕಿ ಮುಂದುವರೆದಿದೆ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT