ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಿರಿಯರ ವಿಶ್ವಕಪ್ ಕ್ರಿಕೆಟ್ : ಭಾರತ –ಪಾಕ್ ಮುಖಾಮುಖಿ

Last Updated 14 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ದುಬೈ (ಪಿಟಿಐ): ಭಾರತ ಕಿರಿಯರ ತಂಡ 2014ರಲ್ಲಿ ನಡೆಯಲಿರುವ 19 ವರ್ಷದೊಳಗಿನವರ ವಿಶ್ವಕಪ್‌ ಕ್ರಿಕೆಟ್ ಟೂರ್ನಿಯ  ಮೊದಲ ಪಂದ್ಯ ದಲ್ಲಿ ಪಾಕಿಸ್ತಾನದ ಸವಾಲನ್ನು ಎದುರಿಸಲಿದೆ.

ಮುಂದಿನ ವರ್ಷದ ಫೆಬ್ರುವರಿ 14 ರಿಂದ ಮಾರ್ಚ್ 1 ರವರೆಗೆ ಟೂರ್ನಿ ನಡೆಯಲಿದೆ. ಫೆಬ್ರುವರಿ 15 ರಂದು ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣ ದಲ್ಲಿ ನಡೆಯುವ ಪಂದ್ಯದಲ್ಲಿ  ಭಾರತ ತನ್ನ ಸಾಂಪ್ರ ದಾಯಿಕ ಎದುರಾಳಿ ಪಾಕಿ ಸ್ತಾನದ ಜೊತೆ ಪೈಪೋಟಿ ನಡೆಸಲಿದೆ.

ಟೂರ್ನಿಯಲ್ಲಿ ಭಾರತ ಒಟ್ಟು ಮೂರು ಬಾರಿ (2000, 2008 ಮತ್ತು 2012) ಪ್ರಶಸ್ತಿ ಜಯಿಸಿದ್ದರೆ ಪಾಕಿಸ್ತಾನ ತಂಡ  ಎರಡು ಬಾರಿ ಪ್ರಶಸ್ತಿ ತನ್ನದಾಗಿಸಿಕೊಂಡಿದೆ. 2012ರ ವಿಶ್ವಕಪ್‌ ಸೆಮಿಫೈನಲ್ ನಲ್ಲಿ ಪಾಕ್ ವಿರುದ್ಧ ಭಾರತ ಒಂದು ವಿಕೆಟ್‌ನಿಂದ ರೋಚಕ ಜಯ ಸಾಧಿಸಿತ್ತು.

16 ದಿನಗಳ ಕಾಲ ನಡೆಯುವ ಟೂರ್ನಿಯಲ್ಲಿ ಒಟ್ಟು 16 ತಂಡಗಳು ಪಾಲ್ಗೊಳ್ಳಲಿದ್ದು,ನಾಲ್ಕು ಗುಂಪುಗಳನ್ನಾಗಿ ವಿಭಾಗಿಸಲಾಗಿದೆ.
ಭಾರತ ತಂಡ ಪಾಕಿಸ್ತಾನ, ಸ್ಕಾಟ್ಲೆಂಡ್ ಮತ್ತು ಪಪುವಾ ನ್ಯೂ ಗಿನಿ ತಂಡಗಳೊಂದಿಗೆ ‘ಎ’ ಗುಂಪಿನಲ್ಲಿ ಸ್ಥಾನ ಪಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT