ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಿರುಕುಳ: ಶಿಕ್ಷಕನ ಅಮಾನತಿಗೆ ಆಗ್ರಹ

Last Updated 9 ಜನವರಿ 2013, 6:46 IST
ಅಕ್ಷರ ಗಾತ್ರ

ಶಿಗ್ಗಾವಿ: ಪಟ್ಟಣದ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ವಿದ್ಯಾರ್ಥಿನಿ ಯರೊಂದಿಗೆ ಅನುಚಿತ ವರ್ತನೆ, ಲೈಂಗಿಕ ಕಿರುಕುಳ ನೀಡುತ್ತಿರುವ ಶಿಕ್ಷಕನನ್ನು ಅಮಾನತು ಮಾಡಬೇಕೆಂದು ಒತ್ತಾಯಿಸಿ ತಾಲ್ಲೂಕು ಎಸ್‌ಎಫ್‌ಐ ಕಾರ್ಯಕರ್ತರು ಶಿಕ್ಷಣಾಧಿಕಾರಿ ಕಾರ್ಯಲಯದ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.

ನಳಂದ ಶಿಕ್ಷಣ ಸಂಸ್ಥೆ ಶಿಕ್ಷಕ ಆರ್. ಆರ್.ಹತ್ತಿ ಶಾಲೆಯ ವಿದ್ಯಾರ್ಥಿನಿಯರಿಗೆ ಕಳೆದ ಒಂದು ವಾರದಿಂದ ಲೈಂಗಿಕ ಕಿರುಕುಳ ನೀಡುತ್ತಿದ್ದು, ಇಲಾಖೆಯ ಅಧಿಕಾರಿಗಳು ಅವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯುದ್ದಕ್ಕೂ ಶಿಕ್ಷಕನ ವಿರುದ್ಧ ಘೋಷಣೆ ಕೂಗಿದರು. ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದ ಎಸ್‌ಎಫ್‌ಐ ತಾಲ್ಲೂಕು ಘಟಕದ ಅಧ್ಯಕ್ಷ ಸುಭಾಷ್ ಮಾದರ, ಮುಗ್ದ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ಶಿಕ್ಷಕರು ಆರೋಗ್ಯಕರ ಸಮಾಜಕ್ಕೆ ಮಾರಕ. ಅಂತವರು ಈ ಕ್ಷೇತ್ರದಲ್ಲಿ ಇರಬಾರದು. ಈ ಕೂಡಲೇ ಅವರನ್ನುಅಮಾನತ್ತು ಮಾಡುವಂತೆ ಆಗ್ರಹಿಸಿದರು.

ನಂತರ ಕಾರ್ಯಕರ್ತರು ದೈಹಿಕ ಶಿಕ್ಷಣಾಧಿಕಾರಿ ಆರ್.ಎಸ್. ಪಟ್ಟಣಶೆಟ್ಟರ್ ಅವರಿಗೆ ಮನವಿ ಸಲ್ಲಿಸಿದರು.  ಎಸ್‌ಎಫ್‌ಐ ತಾಲ್ಲೂಕು ಘಟಕದ ಕಾರ್ಯದರ್ಶಿ ಮಲ್ಲೇಶ ಗೋಟನವರ, ವಿಜಯ ಈಳಿಗೇರ, ಜ್ಯೋತಿ ದೊಡ್ಮನಿ, ವಿನಾಯಕ ಎಳಮಲ್ಲಿ ಸೇರಿದಂತೆ ಎಸ್‌ಎಫ್‌ಐ ನೂರಾರು ಕಾರ್ಯಕರ್ತರು, ವಿದ್ಯಾರ್ಥಿನಿಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT