ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೀಳರಿಮೆ ತೊರೆದು ಕೆಲಸ ಮಾಡಿ

Last Updated 30 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಯಲಹಂಕ: ಅಂಗನವಾಡಿ ಕಾರ್ಯಕರ್ತೆಯರು ತಮ್ಮಲ್ಲಿರುವ ಕೀಳರಿಮೆ ತೊರೆದು ಪ್ರಾಮಾಣಿಕತೆ ಮತ್ತು ಶ್ರದ್ಧೆಯಿಂದ ಕಾರ್ಯನಿರ್ವಹಿಸಿದರೆ ಭವಿಷ್ಯದಲ್ಲಿ ಉತ್ತಮ ಅವಕಾಶಗಳು ಒದಗಿ ಬರುತ್ತವೆ ಎಂದು ಶಾಸಕ ಎಸ್.ಆರ್.ವಿಶ್ವನಾಥ್ ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಬೆಂಗಳೂರು ಉತ್ತರ ತಾಲ್ಲೂಕು ಸಮಗ್ರ ಶಿಶು ಅಭಿವೃದ್ಧಿ ಸೇವೆಗಳ ಯೋಜನೆ ವತಿಯಿಂದ ಇಲ್ಲಿನ ಚೌಡೇಶ್ವರಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಅಂಗನವಾಡಿ ಕಾರ್ಯಕರ್ತೆಯರ ದಿನಾಚರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಅಂಗನವಾಡಿ ಕಾರ್ಯಕರ್ತೆಯರಿಗೆ ಕ್ಷೇತ್ರ ವ್ಯಾಪ್ತಿಯಲ್ಲಿ ನಿವೇಶನ ನೀಡುವ ಪ್ರಕ್ರಿಯೆಗೆ ಈಗಾಗಲೇ ಚಾಲನೆ ನೀಡಲಾಗಿದ್ದು, ಪಂಚಾಯಿತಿಗಳಿಂದ ಅರ್ಹ ಫಲಾನುಭವಿಗಳ ಪಟ್ಟಿ ಸಿದ್ದಪಡಿಸಿಕೊಟ್ಟರೆ ಶೀಘ್ರದಲ್ಲೇ ನಿವೇಶನ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಬೆಂಗಳೂರು ನಗರ ಉಪನಿರ್ದೇಶಕ ರಮೇಶ್ ಎಸ್.ಹಾಲಬಾವಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಮರಣ ಹೊಂದಿದ ಕಾರ್ಯಕರ್ತೆ ಹಾಗೂ ಸಹಾಯಕಿಯರ ಕುಟುಂಬ ಸದಸ್ಯರಿಗೆ ಕ್ರಮವಾಗಿ 20 ಹಾಗೂ 10 ಸಾವಿರ ರೂಪಾಯಿ ಮರಣ ಪರಿಹಾರದ ಚೆಕ್‌ನ್ನು ವಿತರಿಸಲಾಯಿತು. ಹೇರೋಹಳ್ಳಿ ವೃತ್ತದ ಬಸವೇಶ್ವರನಗರ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಕಮಲಾ ಅವರಿಗೆ `ಅತ್ಯುತ್ತಮ ಕಾರ್ಯಕರ್ತೆ ಪ್ರಶಸ್ತಿ~ ನೀಡಿ ಗೌರವಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT