ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಕ್ಕೆಹಳ್ಳಿ ಮಹಾಲಿಂಗೇಶ್ವರ ದೇವಳದ ಜೀರ್ಣೋದ್ಧಾರಕ್ಕೆ ಚಾಲನೆ

Last Updated 1 ಅಕ್ಟೋಬರ್ 2012, 6:00 IST
ಅಕ್ಷರ ಗಾತ್ರ

ಬ್ರಹ್ಮಾವರ: ಗ್ರಾಮದಲ್ಲಿರುವ ದೇವಸ್ಥಾನಗಳ ಜೀರ್ಣೋದ್ಧಾರ ಕಾರ್ಯದಿಂದ ಗ್ರಾಮಗಳ ಅಭಿವೃದ್ಧಿಯೊಂದಿಗೆ ಗ್ರಾಮದಲ್ಲಿ ಸುಖ, ನೆಮ್ಮದಿ ಸದಾ ನೆಲೆಸುತ್ತದೆ ಎಂದು ಕಾಪು ಶಾಸಕ ಲಾಲಾಜಿ ಮೆಂಡನ್ ಹೇಳಿದರು.

ಕುಕ್ಕೆಹಳ್ಳಿಯಲ್ಲಿ ಶುಕ್ರವಾರ ಅವರು ಸುಮಾರು 400ವರ್ಷಗಳ ಇತಿಹಾಸವಿರುವ ಮಹಾಲಿಂಗೇಶ್ವರ ದೇವರಿಗೆ ನೂತನ ಶಿಲಾಮಯ ದೇಗುಲ, ತೀರ್ಥ ಮಂಟಪ ನಿರ್ಮಾಣದ ಮೊದಲ ಹಂತದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

ಈ ಸಂದರ್ಭ ಮಾತನಾಡಿದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಡಾ.ನರಸಿಂಗ ಶೆಟ್ಟಿ ಜಾತಿ ಮತ ಬೇಧವಿಲ್ಲದೇ ಊರಿನ ಸಮಸ್ತ ಜನರ ಸಹಕಾರದಿಂದ ದೇವಳದ ಜೀರ್ಣೋ ದ್ಧಾರದ ಕನಸು ನನಸಾಗುವ ಕಾಲ ಬಂದಿದೆ. ಮುಂದೆ ಕೂಡ ದಾನಿಗಳ ಮತ್ತು ಊರವರ ಸಹಕಾರ ಅಗತ್ಯ ಎಂದರು.

ಧಾರ್ಮಿಕ ಕಾರ್ಯಕ್ರಮಗಳು ವೇದಮೂರ್ತಿ ಶ್ರೀನಿವಾಸ ತಂತ್ರಿ  ಪಾಡಿಗಾರು  ನೇತೃತ್ವದಲ್ಲಿ ನಡೆಯಿತು.
ಜಿಲ್ಲಾ ಪಂಚಾಯಿತಿ ಸದಸ್ಯೆ ಗೋಪಿ ಕೆ ನಾಯ್ಕ, ತಾಲ್ಲೂಕು ಪಂಚಾಯಿತಿ ಸದಸ್ಯೆ ನಾಗವೇಣಿ ಪುತ್ರನ್, ಕುಕ್ಕೆಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗಿರಿಜಾ ಸಾಲಿಯಾನ್ ಮತ್ತು ಆಡಳಿತ ಮಂಡಳಿಯ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.  ಜೀರ್ಣೋದ್ಧಾರದ ಸಮಿತಿಯ ಉಪಾಧ್ಯಕ್ಷ  ಕೆ.ಸತ್ಯನಾಥ ಹೆಗ್ಡೆ ಸ್ವಾಗತಿಸಿದರು. ಆಡಳಿತ ಮೊಕ್ತೇಸರ ಜಯರಾಮ ಹೆಗ್ಡೆ ವಂದಿಸಿದರು. ಪ್ರವೀಣ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT