ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ಕುಟುಂಬ ನಿರ್ವಹಣೆಗೆ ಗುಡಿ ಕೈಗಾರಿಕೆ ಅಗತ್ಯ'

Last Updated 19 ಜುಲೈ 2013, 5:16 IST
ಅಕ್ಷರ ಗಾತ್ರ

ಶಿರಹಟ್ಟಿ: ಮಹಿಳೆಯರು ತಮ್ಮ ಕುಟುಂಬ ನಿರ್ವಹಣೆಗಾಗಿ ಗುಡಿ ಕೈಗಾರಿಕೆಗಳಲ್ಲಿ ತೊಡಗಿಸಿಕೊಂಡು ಆರ್ಥಿಕ ಭದ್ರತೆಯನ್ನು ರೂಪಿಸಿಕೊಳ್ಳಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಬಿ.ಎನ್. ರಾಟಿ ಹೇಳಿದರು.

ಪಟ್ಟಣದ ಡಾನ್‌ಬಾಸ್ಕೋ ಸಂಸ್ಥೆಯಡಿ ಈಚೆಗೆ  ಜರುಗಿದ ಮಹಿಳೆಯರ ಸಶಕ್ತತೆಗಾಗಿ ಗೃಹ ಕೈಗಾರಿಕೆ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ವಿನಾಕಾರಣ ದುಂದುವೆಚ್ಚ ಸಲ್ಲದು. ಅದೇ ಹಣವನ್ನು ಮಕ್ಕಳ ಶೈಕ್ಷಣಿಕ ಅನುಕೂಲಕ್ಕಾಗಿ ಉಪಯೋಗಿಸಬೇಕು ಎಂದು ಹೇಳಿದರು. ಮಕ್ಕಳ ಸರ್ವಾಂಗೀಣ ಪ್ರಗತಿಗೆ ಪಾಲಕರು ಶ್ರಮಿಸಬೇಕು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಮಕ್ಕಳ ಶಿಕ್ಷಣ ಅಭಿವದ್ಧಿಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಜಯಶ್ರೀ ಹಿರೇಮಠ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT