ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಡಿಯುವ ನೀರಿಗೆ ರೂ 6.48 ಕೋಟಿ ಬಿಡುಗಡೆ

Last Updated 19 ಡಿಸೆಂಬರ್ 2012, 9:19 IST
ಅಕ್ಷರ ಗಾತ್ರ

ಚನ್ನಗಿರಿ: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ತುರ್ತು ಕುಡಿಯುವ ನೀರಿನ ಸಮಸ್ಯೆ ನಿವಾರಣೆಗಾಗಿ ರೂ 6.48 ಕೋಟಿ ಅನುದಾನ ಬಿಡುಗಡೆಯಾಗಿದೆ. ಮುಂಬರುವ ಬೇಸಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದರೆ ಅಧಿಕಾರಿಗಳೇ ಹೊಣೆ ಎಂದು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಪಟ್ಟಣದ ತಾಲ್ಲೂಕು ಪಂಚಾಯ್ತಿ ಸಭಾಂಗಣದಲ್ಲಿ ಮಂಗಳವಾರ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಿವಿಧ ಗ್ರಾಮಗಳಲ್ಲಿ ಟಿಎಸ್‌ಪಿ ಹಾಗೂ ಎಸ್‌ಟಿಪಿ ಯೋಜನೆಯಡಿಯಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕಾಗಿ ರೂ 6.25 ಕೋಟಿ ಅನುದಾನ ಮಂಜೂರಾಗಿದೆ. ಚನ್ನಗಿರಿ-ಗರಗ ರಸ್ತೆ ಅಭಿವೃದ್ಧಿಗೆರೂ 90 ಲಕ್ಷ ಸೇರಿದಂತೆ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ರೂ 2.95 ಕೋಟಿ ಅನುದಾನ ಬಿಡುಗಡೆಯಾಗಿದೆ. ಮಾರ್ಚ್ ತಿಂಗಳೊಳಗೆ ಬಾಕಿ ಇರುವ ಎಲ್ಲಾ ಕಾಮಗಾರಿಗಳನ್ನು ಪೂರ್ಣ ಗೊಳಿಸಬೇಕು ಎಂದರು.

ತಾ.ಪಂ. ಅಧ್ಯಕ್ಷ ಕೆ.ಜಿ. ಮರುಳಸಿದ್ದಪ್ಪ, ಉಪಾಧ್ಯಕ್ಷೆ ಆರ್. ಲಲಿತಾ, ತಹಶೀಲ್ದಾರ್ ಎಚ್.ಎಂ. ರೇವಣಸಿದ್ದಪ್ಪ, ಇಒ ಶಿವಕುಮಾರ್, ಶಿಶು ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಎ.ಜಿ. ಶಿವಪ್ರಕಾಶ್, ಸಹಾಯಕ ಕೃಷಿ ನಿರ್ದೇಶಕ ಕಮಲಾನಾಯ್ಕ ಸಭೆಯಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT