ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಡಿಯುವ ನೀರಿಗೆ ಹಾಹಾಕಾರ.ಗ್ರಾಪಂ ಕಚೇರಿಗೆ ಮುತ್ತಿಗೆ

Last Updated 21 ಮಾರ್ಚ್ 2011, 19:30 IST
ಅಕ್ಷರ ಗಾತ್ರ

ಮದ್ದೂರು: ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಆಗ್ರಹಿಸಿ ಸಮೀಪದ ಕದಲೂರು ಗ್ರಾಮ ಪಂಚಾಯಿತಿ ಕಚೇರಿಗೆ ಸೋಮವಾರ ಮಹಿಳೆಯರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಗ್ರಾಪಂ ಅಧ್ಯಕ್ಷರು ಹಾಗೂ ಅಧಿಕಾರಿಗಳ ವಿರುದ್ಧ ಧಿಕ್ಕಾರ ಮೊಳಗಿಸಿದ ಗ್ರಾಮಸ್ಥರು, ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಇನ್ನಷ್ಟು ಹಾಹಾಕಾರ ಹೆಚ್ಚಲಿದ್ದು, ಈಗಲೇ ಕುಡಿಯುವ ನೀರಿಗೆ ಸರಿಯಾದ ವ್ಯವಸ್ಥೆ ಮಾಡಲು ಮುಂದಾಗಬೇಕು ಎಂದು ಒತ್ತಾಯಿಸಿದರು.
 

ಮುಖಂಡ ಮಹದೇವು ಮಾತನಾಡಿ, ಕದಲೂರು ಗ್ರಾಪಂ ವ್ಯಾಪ್ತಿಯ ಹಳ್ಳಿಗಳಿಗೆ ಪೂರೈಸಲಾಗುತ್ತಿರುವ ನೀರಿನ ಪ್ರಮಾಣ ಕಡಿಮೆಯಾಗಿದ್ದು, ಮಹಿಳೆಯರು, ಮಕ್ಕಳು ಕುಡಿಯುವ ನೀರಿಗಾಗಿ ಖಾಸಗಿ ಪಂಪ್ ಮನೆಗಳನ್ನು ಆಶ್ರಯಿಸಬೇಕಾದ ಪರಿಸ್ಥಿತಿ ಒದಗಿದೆ. ಕುಡಿಯುವ ನೀರಿನ ಸಮರ್ಪಕ ಪೂರೈಕೆ ಕುರಿತು ಪಿಡಿಓ ಅವರಿಗೆ ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದರು.

ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷ ಮೀನಾಕ್ಷಿ, ಮುಖಂಡರಾದ ರಮೇಶ್, ಚೆನ್ನಮ್ಮ, ಸರೋಮ್ಮ, ಮರಗಮ್ಮ, ಚಿಕ್ಕೋಳಮ್ಮ, ಲಿಂಗಮ್ಮ, ಮಂಜುಳ, ಲೀಲಾ, ಕೆಂಪಮ್ಮ ಸೇರಿದಂತೆ ನೂರಾರು ಮಂದಿ ಭಾಗವಹಿಸಿದ್ದರು.


 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT