ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಡಿಯುವ ನೀರಿನ ಯೋಜನೆ ಸದ್ಬಳಕೆಗೆ ಸಲಹೆ

Last Updated 20 ಫೆಬ್ರುವರಿ 2013, 7:56 IST
ಅಕ್ಷರ ಗಾತ್ರ

ಮಸ್ಕಿ: ಮಸ್ಕಿ ಪಟ್ಟಣದ ದಶಕದ ಕನಸಾಗಿದ್ದ ಶಾಶ್ವತ ಕುಡಿಯುವ ನೀರಿನ ಯೋಜನೆ ಇದೀಗ ಕಾರ್ಯಾರಂಭ ಮಾಡಿದ್ದು, ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಹಾಗೂ ಸಾರ್ವಜನಿಕರು ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕ ಪ್ರತಾಪಗೌಡ ಪಾಟೀಲ ಮಂಗಳವಾರ ಇಲ್ಲಿ ತಿಳಿಸಿದರು.

ಯೋಜನೆಯಲ್ಲಿ ನಿರ್ಮಿಸಿದ ಕೆರೆಗೆ ನೀರು ತುಂಬಿಸುವ ಕಾರ್ಯಕ್ಕೆ ಚಾಲನೆ ನೀಡಿದ ನಂತರ ಅವರು ಮಾತನಾಡಿದರು. ಕಳೆದ 10 ವರ್ಷಗಳಿಂದ ಕುಡಿಯುವ ನೀರಿನ ಯೋಜನೆ ಜಾರಿ ಬಗ್ಗೆ ಪ್ರಯತ್ನ ನಡೆದಿತ್ತು. ಇದೀಗ ಅದು ಸಾಕಾರವಾಗಿದೆ ಎಂದರು. ಬರುವ ಒಂದು ತಿಂಗಳ ಒಳಗಾಗಿ ಶುದ್ಧ ಕುಡಿಯುವ ನೀರನ್ನು ಜನತೆ ಪೂರೈಕೆ ಮಾಡಲಾಗುವುದು ಎಂದರು.

ರಾಜೀವ್‌ಗಾಂಧಿ ಕುಡಿಯುವ ನೀರು ಸರಬರಾಜು ಯೋಜನೆ ಅಡಿಯಲ್ಲಿ ಸುಮಾರು 7 ಕೋಟಿ ರೂಪಾಯಿ ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗಿದೆ. ಆರು ತಿಂಗಳ ಹಿಂದೆಯೇ ಕಾಮಗಾರಿ ಪೂರ್ಣಗೊಳ್ಳಬೇಕಾಗಿತ್ತು. ತಾಂತ್ರಿಕ ಕಾರಣಗಳಿಂದ ವಿಳಂಬವಾಗಿದೆ ಎಂದರು. ಮಸ್ಕಿ ಕ್ಷೇತ್ರದ ಸುಮಾರು 100 ಕ್ಕೂ ಹೆಚ್ಚು ಹಳ್ಳಿಗಳಿಗೆ ಈಗಾಗಲೇ ಶುದ್ಧ ಕುಡಿಯುವ ನೀರು ಪೂರೈಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಜಿಲ್ಲಾ ಪಂಚಾಯಿತಿ ಸದಸ್ಯ ಎಚ್. ಬಿ. ಮುರಾರಿ ಮಾತನಾಡಿ ಈ ಯೋಜನೆ ಶಾಸಕ ಪ್ರತಾಪಗೌಡ ಪಾಟೀಲ ಅವರ ಕನಸಿನ ಕೂಸು ಎಂದು ಬಣ್ಣೀಸಿದರು. ಎಪಿಎಂಸಿ ಅಧ್ಯಕ್ಷ ಮಂಜುನಾಥ ಪಾಟೀಲ, ಡಾ. ಶಿವಶರಣಪ್ಪ ಇತ್ಲಿ, ಡಾ. ಬಿ.ಎಚ್. ದಿವಟರ್, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಸಿ.ಎಸ್. ಪಾಟೀಲ ಮಾತನಾಡಿದರು.

ಗಚ್ಚಿನಮಠದ ರುದ್ರಮುನಿದೇವರು, ಪದ್ಮಾವತಿ ಪ್ರತಾಪಗೌಡ ಪಾಟೀಲ, ಗ್ರಾಮ ಪಂಚಾಯಿತಿ ಅಧ್ಯಕ್ಷ ಅಮರೇಶ ಮಸ್ಕಿ, ಉಪಾಧ್ಯಕ್ಷೆ ನಾಗಮ್ಮ ಚಿಗರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಂದಾನಪ್ಪ ಗುಂಡಳ್ಳಿ, ತಾಲ್ಲೂಕು ಪಂಚಾಯಿತಿ ಸದಸ್ಯ ಹನುಮಂತಪ್ಪ ಮೋಚಿ, ದೊಡ್ಡಪ್ಪ ಕಡಬೂರು, ಸಿದ್ದಣ್ಣ ಹೂವಿನಭಾವಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹನುಮೇಶ ಕುಲಕರ್ಣಿ ಮತ್ತಿತರರು ವೇದಿಕೆ ಮೇಲೆ ಉಪಸ್ಥಿತರಿದ್ದರು ಇದ್ದರು.

ಶಾಸಕರಿಗೆ ಸನ್ಮಾನ: ಪಟ್ಟಣದ ಶಾಶ್ವತ ಕುಡಿಯುವ ನೀರಿನ ಯೋಜನೆ ಅನುಷ್ಠಾನಗೊಳಿಸಿದ ಶಾಸಕ ಪ್ರತಾಪಗೌಡ ಪಾಟೀಲ ಹಾಗೂ ಅವರ ಪತ್ನಿ ಪದ್ಮಾವತಿ ಪಾಟೀಲ ಅವರನ್ನು ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ವತಿಯಿಂದ ಅಧ್ಯಕ್ಷರು ಹಾಗೂ ಸದಸ್ಯರು ಸನ್ಮಾನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT