ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಡಿಯುವ ನೀರಿನ ಸಮಸ್ಯೆ: ಖಾಲಿ ಕೊಡ ಹಿಡಿದು ಪ್ರತಿಭಟನೆ

Last Updated 8 ಆಗಸ್ಟ್ 2011, 19:30 IST
ಅಕ್ಷರ ಗಾತ್ರ

ಕೆಂಗೇರಿ: ಸುಮಾರು ಒಂದು ವರ್ಷದಿಂದಲೂ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ ಎಂದು ಆರೋಪಿಸಿ ನಗರದ ಹೇರೋಹಳ್ಳಿ ವಾರ್ಡ್ ವ್ಯಾಪ್ತಿಯ ವಿಘ್ನೇಶ್ವರ ನಗರ, ಮುನೇಶ್ವರ ನಗರದ ಮಹಿಳೆಯರು ಖಾಲಿ ಕೊಡಗಳನ್ನು ಪ್ರದರ್ಶಿಸುವ ಮೂಲಕ ಪ್ರತಿಭಟನೆ ನಡೆಸಿದರು.

ಸ್ಥಳೀಯ ಪಾಲಿಕೆ ಸದಸ್ಯರು ಹಾಗೂ ಶಾಸಕರ ನಡುವಿನ ಅಸಹಕಾರ ಮನೋಭಾವದಿಂದ ಇಲ್ಲಿನ ಜನತೆ ಕುಡಿಯುವ ನೀರಿಗಾಗಿ ತೀವ್ರ ಬವಣೆ ಪಡುವಂತಾಗಿದೆ ಎಂದು ಅವರು ಆರೋಪಿಸಿದರು.

ಒಂದು ವರ್ಷದಿಂದಲೂ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ಸಂಬಂಧ ಸಂಬಂಧಪಟ್ಟವರಿಗೆಲ್ಲಾ ದೂರು ನೀಡುತ್ತಾ ಬರುತ್ತಿದ್ದರೂ ಸಮಸ್ಯೆ ಮಾತ್ರ ಪರಿಹಾರವಾಗಿಲ್ಲ. ಇದರಿಂದ ನಮ್ಮ ಸಮಸ್ಯೆಯನ್ನು ಕೇಳುವವರೇ ಇಲ್ಲದಂತಾಗಿದೆ ಎಂದು ಅಳಲನ್ನು ತೋಡಿಕೊಂಡರು.

ವಾರಕ್ಕೊಮ್ಮೆ ಟ್ಯಾಂಕರ್‌ನಲ್ಲಿ ನೀರು ಸರಬರಾಜು ಮಾಡಿದರೂ ಒಂದು ಮನೆಗೆ ಎರಡು ಬಿಂದಿಗೆ ನೀರು ದೊರೆಯುವುದು ಕಷ್ಟವಾಗಿದೆ. ಪರಿಣಾಮ ದುಬಾರಿ ಹಣ ನೀಡಿ ಖಾಸಗಿ ಟ್ಯಾಂಕರ್‌ಗಳಿಂದ ನೀರನ್ನು ಕೊಂಡುಕೊಳ್ಳುವಂತಾಗಿದೆ. ಈ ನೀರನ್ನು ಬಳಸುವುದರಿಂದ ಚರ್ಮ ರೋಗ, ಗಂಟಲು ಬೇನೆ, ಜ್ವರ ಮತ್ತಿತರ ರೋಗಗಳಿಗೆ ತುತ್ತಾಗುತ್ತಿದ್ದೇವೆ ಎಂದು ದೂರಿದರು.

ಕೂಡಲೇ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸದಿದ್ದಲ್ಲಿ ಬಿಬಿಎಂಪಿ ಮುಖ್ಯ ಕಚೇರಿಯ ಮುಂದೆ ಖಾಲಿ ಕೊಡಗಳನ್ನು ಪ್ರದರ್ಶಿಸಿ ತೀವ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT